ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಸ್ಕಿ ಶಾಸಕ ಪ್ರತಾಪ ಗೌಡ ರಾಜೀನಾಮೆ

Last Updated 6 ಏಪ್ರಿಲ್ 2013, 19:59 IST
ಅಕ್ಷರ ಗಾತ್ರ

ಬೆಂಗಳೂರು:  ಬಿಜೆಪಿಯ ಮಸ್ಕಿ ಶಾಸಕ ಪ್ರತಾಪ ಗೌಡ ಪಾಟೀಲ ಅವರು ಶನಿವಾರ ವಿಧಾನಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.
ಬೆಳಿಗ್ಗೆ ವಿಧಾನಸೌಧಕ್ಕೆ ರಾಜೀನಾಮೆ ನೀಡಲು ಬಂದ ಪಾಟೀಲರಿಗೆ ಸ್ಪೀಕರ್ ಕೆ.ಜಿ.ಬೋಪಯ್ಯ ಅವರು ಸಿಗಲಿಲ್ಲ. ಅವರು ಮಡಿಕೇರಿಯಲ್ಲಿರುವ ಕಾರಣ ಅಲ್ಲಿಗೇ ತೆರಳಿ ರಾಜೀನಾಮೆ ನೀಡಿದ್ದಾರೆ.

`ಬೋಪಯ್ಯ ಅವರು ಪ್ರಚಾರ ಕಾರ್ಯದಲ್ಲಿ ತೊಡಗಿದ್ದರು. ಹೀಗಾಗಿ ಖದ್ದು ಭೇಟಿ ಮಾಡಿ ರಾಜೀನಾಮೆ ಪತ್ರ ನೀಡಲು ಸಾಧ್ಯವಾಗಲಿಲ್ಲ. ಅವರ ಸಲಹೆಯಂತೆ ಮನೆಯಲ್ಲಿ ರಾಜೀನಾಮೆ ಪತ್ರ ಕೊಟ್ಟು ಬಂದಿದ್ದೇನೆ' ಎಂದು ಅವರು `ಪ್ರಜಾವಾಣಿ'ಗೆ ತಿಳಿಸಿದರು.

ಮಸ್ಕಿ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಅವರು ಕಣಕ್ಕೆ ಇಳಿಯಲಿದ್ದಾರೆ. `ಕಾಂಗ್ರೆಸ್ ಟಿಕೆಟ್ ಸಿಗುವ ಭರವಸೆ ಸಿಕ್ಕಿದೆ' ಎಂದು ಪಾಟೀಲರು ವಿವರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT