ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಾಂತೇಶ್: ಶೀಘ್ರ ದುಷ್ಕರ್ಮಿಗಳ ಬಂಧನ

Last Updated 21 ಮೇ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು: ಸಹಕಾರ ಸಂಘಗಳ ಲೆಕ್ಕ ಪರಿಶೋಧನಾ ಇಲಾಖೆ ಉಪನಿರ್ದೇಶಕ ಎಸ್.ಪಿ. ಮಹಾಂತೇಶ್ ಅವರ ಕೊಲೆ ಪ್ರಕರಣದ ಸಂಬಂಧ ಪೊಲೀಸರು ಈವರೆಗೆ ಯಾವುದೇ ಆರೋಪಿಗಳನ್ನು          ಬಂಧಿಸಿಲ್ಲ.

ಕಾರ್ಯಕ್ರಮವೊಂದರಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಅವರು, `ಮಹಾಂತೇಶ್ ಅವರ ಕೊಲೆ ಪ್ರಕರಣದ ತನಿಖಾ ಕಾರ್ಯ ಶೇ 75ರಷ್ಟು ಪೂರ್ಣಗೊಂಡಿದ್ದು, ಕೆಲವರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ~ ಎಂದು  ತಿಳಿಸಿದರು.

ಒಂದೆರಡು ದಿನದಲ್ಲಿ ಬಂಧನ:  ತೀವ್ರ ಕುತೂಹಲ ಕೆರಳಿಸಿರುವ ಈ ಪ್ರಕರಣದ ತನಿಖೆಯ ಪ್ರಗತಿ ಕುರಿತು ಹಿರಿಯ ಪೊಲೀಸ್ ಅಧಿಕಾರಿಗಳ ಜತೆ ಚರ್ಚೆ ನಡೆಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಆರ್.ಅಶೋಕ, `ಪ್ರಕರಣದ ಆರೋಪಿಗಳನ್ನು ಒಂದೆರಡು ದಿನಗಳಲ್ಲಿ ಬಂಧಿಸಲಾಗುವುದು~ ಎಂದರು. ಹಲವು ಹಿರಿಯ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT