ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಾದಾಯಿ: ಸರ್ವಪಕ್ಷ ಸಭೆಗೆ ಎಚ್‌ಡಿಕೆ ಆಗ್ರಹ

Last Updated 20 ಡಿಸೆಂಬರ್ 2013, 20:07 IST
ಅಕ್ಷರ ಗಾತ್ರ

ಬೆಂಗಳೂರು: ಮಹಾದಾಯಿ ನದಿ ತಿರುವು ಯೋಜನೆಯ ವಾಸ್ತವ ಸಂಗತಿಯನ್ನು ನ್ಯಾಯಮಂಡಳಿಗೆ ತಿಳಿಸುವ ಉದ್ದೇಶದಿಂದ ಕೂಡಲೇ ಸರ್ವಪಕ್ಷಗಳ ಸಭೆ ಕರೆಯಬೇಕು ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ
ಎಚ್‌.ಡಿ. ­ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

ನ್ಯಾಯಮಂಡಳಿಯ ಅಧ್ಯಕ್ಷ ಜೆ.ಎಂ.­ಪಾಂಚಾಲ್‌ ನೇತೃತ್ವದ ತಂಡ ಇದೇ 24ರವರೆಗೆ ಜಲಾನಯನ ಪ್ರದೇಶದಲ್ಲಿ ಅಧ್ಯಯನ ನಡೆಸಲಿದೆ. ತಂಡಕ್ಕೆ ವಾಸ್ತವ ಸ್ಥಿತಿಯನ್ನು ಮನ­ವರಿಕೆ ಮಾಡಿಕೊಡಬೇಕು ಎಂದು ಆಗ್ರಹಿಸಿದ್ದಾರೆ.

ಈ ಬಗ್ಗೆ ಮುಖ್ಯಮಂತ್ರಿ ಸಿದ್ದ­ರಾಮಯ್ಯ ಅವರಿಗೆ ಪತ್ರಬರೆದಿದ್ದು, ತಂಡವನ್ನು ಭೇಟಿಯಾಗಿ ಮನವಿ ಸಲ್ಲಿಸುವ ಉದ್ದೇಶದಿಂದ ಅಚ್ಚುಕಟ್ಟು ಪ್ರದೇಶದ ಜನಪ್ರತಿನಿಧಿಗಳು ಹಾಗೂ ಸರ್ವಪಕ್ಷಗಳ ಸಭೆ ಕರೆಯಬೇಕು ಎಂದು ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT