ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಾರಾಷ್ಟ್ರದಿಂದ ಕೃಷ್ಣಾ ನದಿಗೆ 600 ಕ್ಯೂಸೆಕ್ ನೀರು

Last Updated 5 ಮೇ 2012, 19:30 IST
ಅಕ್ಷರ ಗಾತ್ರ

ಬೆಳಗಾವಿ/ಚಿಕ್ಕೋಡಿ:  `ಮಹಾರಾಷ್ಟ್ರದ ರಾಜಾಪುರ ಬ್ಯಾರೇಜ್‌ನಿಂದ ಕೃಷ್ಣಾ ನದಿಗೆ ಶನಿವಾರ ಸುಮಾರು 600 ಕ್ಯೂಸೆಕ್ ನೀರು ಬಿಡಲಾಗಿದ್ದು, ಭಾನುವಾರ ಮುಂಜಾನೆಯ ವೇಳೆಗೆ ನದಿಯಲ್ಲಿ ನೀರಿನ ಹರಿವು ಹೆಚ್ಚಲಿದೆ` ಎಂದು ಜಿಲ್ಲಾಧಿಕಾರಿ ವಿ. ಅನ್ಬುಕುಮಾರ `ಪ್ರಜಾವಾಣಿ~ಗೆ ತಿಳಿಸಿದರು. `ರಾಜಾಪುರ ಬ್ಯಾರೆಜ್‌ನಿಂದ ಶನಿವಾರ 500 ಕ್ಯೂಸೆಕ್ ನೀರನ್ನು ಬಿಡಲಾಗಿದೆ.

ರಾತ್ರಿಯ ವೇಳೆಗೆ 2,000 ಕ್ಯೂಸೆಕ್‌ಗೆ ಏರಲಿದೆ. ಭಾನುವಾರ 5,000 ಕ್ಯೂಸೆಕ್ ಬಿಡಲಾಗುವುದು ಎಂದು ಮಹಾರಾಷ್ಟ್ರ ಸರ್ಕಾರ ತಿಳಿಸಿದೆ.

ಭಾನುವಾರದ ವೇಳೆಗೆ ಕೃಷ್ಣಾ ನದಿಯಲ್ಲಿ ನೀರಿನ ಮಟ್ಟ ಗಣನೀಯವಾಗಿ ಹೆಚ್ಚಲಿದೆ~ ಎಂದು ಅವರು ಹೇಳಿದರು.

`ರಾಜಾಪುರದ ಬ್ಯಾರೇಜ್‌ನಿಂದ ಕೃಷ್ಣಾ ನದಿಗೆ 0.90 ಟಿಎಂಸಿ ಹಾಗೂ ಕಾಳಮ್ಮವಾಡಿ ಜಲಾಶಯದಿಂದ ದೂದಗಂಗಾ ನದಿಗೆ ಒಂದು ಟಿಎಂಸಿ ನೀರು ಬಿಡಲಾಗುತ್ತದೆ.

ಶನಿವಾರ ಕಾಳಮ್ಮವಾಡಿ ಜಲಾಶಯದಿಂದ ದೂದಗಂಗಾ ನದಿಗೆ ಸುಮಾರು 350 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ~ ಎಂದು ಅವರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT