ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಿಳಾ ಆಯೋಗದ ಅಧ್ಯಕ್ಷೆ ವಜಾಕ್ಕೆ ಆಗ್ರಹ

Last Updated 19 ಆಗಸ್ಟ್ 2012, 19:30 IST
ಅಕ್ಷರ ಗಾತ್ರ

ಹುಬ್ಬಳ್ಳಿ: `ಮಂಗಳೂರು ಹೋಂ ಸ್ಟೇ ಮೇಲಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರದ ಪರವಾಗಿ ವರದಿ ನೀಡಿ, ಘಟನೆ  ಸಮರ್ಥಿಸಿಕೊಂಡಿರುವ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಸಿ. ಮಂಜುಳಾ ಅವರನ್ನು ತಕ್ಷಣ ವಜಾಗೊಳಿಸಬೇಕು~ ಎಂದು ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಮಂಜುಳಾ ನಾಯ್ಡು ಭಾನುವಾರ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು.

`ಪ್ರಕರಣದ ತನಿಖೆ ನಡೆಸಿದ ಎಡಿಜಿಪಿ ಬಿಪಿನ್ ಗೋಪಾಲಕೃಷ್ಣ, ಘಟನಾ ಸ್ಥಳದಲ್ಲಿ ಯಾವುದೇ ಮಾದಕ ವಸ್ತು ಪತ್ತೆಯಾಗಿಲ್ಲ. ಪಾರ್ಟಿಯಲ್ಲಿ ಭಾಗವಹಿಸಿದವರು ಗಾಂಜಾ ಸೇವಿಸಿದ್ದರೆಂಬ ಉಲ್ಲೇಖವೂ ಇಲ್ಲ ಎಂದು ಹೇಳಿದ್ದಾರೆ. ಆದರೆ ಮಂಜುಳಾ ಅದಕ್ಕೆ ವ್ಯತಿರಿಕ್ತ ವರದಿ ನೀಡಿದ್ದಾರೆ~ ಎಂದು ದೂರಿದರು.

`ದಾಳಿ ಪ್ರಕರಣವನ್ನು ಸರ್ಕಾರ ಸಿಬಿಐ ತನಿಖೆಗೆ ಒಪ್ಪಿಸಬೇಕು ಅಥವಾ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯೊಬ್ಬರನ್ನು ನೇಮಿಸಿ ತನಿಖೆ ನಡೆಸಬೇಕು. ವಿಶೇಷ ತ್ವರಿತಗತಿ ನ್ಯಾಯಾಲಯ ಸ್ಥಾಪಿಸಿ ಈ ಪ್ರಕರಣವನ್ನು ಶೀಘ್ರ ವಿಚಾರಣೆಗೆ ಒಳಪಡಿಸಬೇಕು~ ಎಂದು ಅವರು ಒತ್ತಾಯಿಸಿದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT