ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಿಳಾ ಟ್ವೆಂಟಿ-20 ವಿಶ್ವಕಪ್: ಆಸ್ಟ್ರೇಲಿಯಾಕ್ಕೆ ಎರಡನೇ ಬಾರಿ ಕಿರೀಟ

Last Updated 7 ಅಕ್ಟೋಬರ್ 2012, 12:20 IST
ಅಕ್ಷರ ಗಾತ್ರ

ಕೊಲಂಬೊ (ಪಿಟಿಐ): ಕ್ಷಣ ಕ್ಷಣಕ್ಕೆ ಕುತೂಹಲ ಕೆರಳಿಸುತ್ತಾ ಸಾಗಿದ ಮಹಿಳಾ ಟ್ವೆಂಟಿ-20 ವಿಶ್ವಕಪ್ ಕ್ರಿಕೆಟ್ ಟೂರ್ನಿಯ ಫೈನಲ್‌ನಲ್ಲಿ ಇಂಗ್ಲೆಂಡ್ ತಂಡವನ್ನು ಸೋಲಿಸಿದ ಆಸ್ಟ್ರೇಲಿಯಾ ತಂಡದವರು ಚಾಂಪಿಯನ್ ಆದರು.

ಆರ್.ಪ್ರೇಮದಾಸ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಅಂತಿಮ ಹಣಾಹಣಿಯಲ್ಲಿ ನಾಲ್ಕು ರನ್‌ಗಳಿಂದ ಗೆದ್ದ ಕಾಂಗರೂ ಬಳಗ ಸತತ ಎರಡನೇ ಬಾರಿಗೆ ಈ ಗೌರವ ಸಂಪಾದಿಸಿತು. ಜೊತೆಗೆ ಲೀಗ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧದ ಸೋಲಿಗೆ ಭರ್ಜರಿಯಾಗಿ ಸೇಡು ತೀರಿಸಿಕೊಂಡರು. ಆದರೆ ಈ ಟೂರ್ನಿಯ ಎಲ್ಲಾ ಪಂದ್ಯಗಳಲ್ಲಿ ಜಯಿಸಿದ್ದ ಇಂಗ್ಲೆಂಡ್ ಫೈನಲ್‌ನಲ್ಲಿ ಎಡವಿತು.

ಆಸ್ಟ್ರೇಲಿಯಾದ 143 ರನ್‌ಗಳ ಮೊತ್ತಕ್ಕೆ ಉತ್ತರವಾಗಿ ಇಂಗ್ಲೆಂಡ್ 20 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 138 ರನ್ ಗಳಿಸಿತು. ಗೆಲ್ಲಲು ಕೊನೆಯ ಓವರ್‌ನಲ್ಲಿ 16 ರನ್‌ಗಳ ಅಗತ್ಯವಿತ್ತು. ಆದರೆ ಆಫ್ ಸ್ಪಿನ್ನರ್ ಎರಿನ್ ಒಸ್ಬೊರ್ನ್ ಓವರ್‌ನಲ್ಲಿ ಇಂಗ್ಲೆಂಡ್ ಗಳಿಸಿದ್ದು ಕೇವಲ 11 ರನ್.

`ಇದೊಂದು ವಿಶೇಷ ಅನುಭವ. ಚಾಂಪಿಯನ್ ಆಗುತ್ತೇವೆ ಎಂಬ ಭರವಸೆ ಇತ್ತು. ಎದುರಾಳಿ ಇಂಗ್ಲೆಂಡ್ ತಂಡದವರು ಉತ್ತಮ ಪೈಪೋಟಿ ನೀಡಿದರು. ಇದುವರೆಗಿನ ಕಠಿಣ ಪ್ರಯತ್ನಕ್ಕೆ ಫಲ ಸಿಕ್ಕಿದೆ~ ಎಂದು ಆಸ್ಟ್ರೇಲಿಯಾ ತಂಡದ ನಾಯಕಿ ಜೋಡಿ ಫೀಲ್ಡ್ಸ್ ನುಡಿದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT