ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಿಳಾ ವಿಶ್ವಕಪ್: ಪಾಕ್ ಎದುರು ಭಾರತಕ್ಕೆ ಸೋಲು

Last Updated 1 ಅಕ್ಟೋಬರ್ 2012, 19:30 IST
ಅಕ್ಷರ ಗಾತ್ರ

ಗಾಲ್ (ಪಿಟಿಐ): ಪುರುಷರ ತಂಡದವರು ಪಾಕಿಸ್ತಾನವನ್ನು ಬಗ್ಗುಬಡಿದ ಸಂಭ್ರಮದಲ್ಲಿದ್ದರೆ, ಇತ್ತ ಭಾರತ ಮಹಿಳೆಯರು ಸಾಂಪ್ರದಾಯಿಕ ಎದುರಾಳಿಗೆ ಶರಣಾಗಿದ್ದಾರೆ.

ಟ್ವೆಂಟಿ-20 ಮಹಿಳೆಯರ ವಿಶ್ವಕಪ್ ಕ್ರಿಕೆಟ್ ಟೂರ್ನಿಯ ಸೋಮವಾರದ ಪಂದ್ಯದಲ್ಲಿ ಭಾರತ ತಂಡದವರು ಕೇವಲ ಒಂದು ರನ್‌ನಿಂದ ಸೋಲು ಕಂಡು ನಿರಾಸೆ ಅನುಭವಿಸಿದರು.

ಪಾಕ್ ತಂಡದ 98 ರನ್‌ಗಳಿಗೆ ಉತ್ತರವಾಗಿ ಭಾರತ 20 ಓವರ್‌ಗಳಲ್ಲಿ 8 ವಿಕೆಟ್ ಕಳೆದುಕೊಂಡು ಕೇವಲ 97 ರನ್ ಗಳಿಸಿತು. ಜೂಲನ್ ಗೋಸ್ವಾಮಿ ಅವರ ಆಲ್‌ರೌಂಡ್ ಆಟ ಗೆಲುವಿನ ಭರವಸೆ ಮೂಡಿಸಿತ್ತಾದರೂ ಉಳಿದವರು ಸಂಪೂರ್ಣ ವಿಫಲರಾದರು.

ಇದರೊಂದಿಗೆ `ಎ~ ಗುಂಪಿನಲ್ಲಿ ಆಡಿದ ಇದುವರೆಗಿನ ಎಲ್ಲಾ ಪಂದ್ಯಗಳಲ್ಲಿ ಭಾರತ ತಂಡದವರು ಸೋಲು ಕಂಡರು. ಈ ತಂಡದರು ಲೀಗ್ ಹಂತದ ಕೊನೆಯ ಪಂದ್ಯದಲ್ಲಿ ಬುಧವಾರ ಆತಿಥೇಯ ಶ್ರೀಲಂಕಾ ತಂಡವನ್ನು ಎದುರಿಸಲಿದ್ದಾರೆ.

ಭಾರತ ಎದುರಿನ ಈ ಪಂದ್ಯದಲ್ಲಿ ಗೆದ್ದರೂ ಪಾಕ್ ಕೂಡ ಸೆಮಿಫೈನಲ್‌ಗೆ ಪ್ರವೇಶ ಪಡೆಯುವಲ್ಲಿ ವಿಫಲವಾಯಿತು. ಈ ಗುಂಪಿನಲ್ಲಿ ಅವರು ಮೂರನೇ ಸ್ಥಾನ ಪಡೆದರು.

ಸಂಕ್ಷಿಪ್ತ ಸ್ಕೋರ್: ಪಾಕಿಸ್ತಾನ: 20 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 98 (ಸನಾ ಮಿರ್ 26; ಜೂಲನ್ ಗೋಸ್ವಾಮಿ 16ಕ್ಕೆ2); ಭಾರತ: 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 97 (ಜೂಲನ್ ಗೋಸ್ವಾಮಿ 21; ನಿದಾ ದಾರ್ 12ಕ್ಕೆ3): ಫಲಿತಾಂಶ: ಪಾಕಿಸ್ತಾನಕ್ಕೆ 1 ರನ್‌ನ ಜಯ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT