ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಿಳೆಯರ ಆರ್ಥಿಕ ಸಬಲತೆಗೆ ಸಲಹೆ

Last Updated 20 ಡಿಸೆಂಬರ್ 2013, 6:33 IST
ಅಕ್ಷರ ಗಾತ್ರ

ತುಮಕೂರು: ಮಹಿಳೆಯರು ಆರ್ಥಿಕವಾಗಿ ಸಬಲರಾಗಲು ಉಪ ಕಸುಬುಗಳನ್ನು ಕೈಗೊಳ್ಳಬೇಕೆಂದು ಜಿಲ್ಲಾ ಪಂಚಾಯತಿ ಅಧ್ಯಕ್ಷೆ ಸಾಕಮ್ಮ ಸಲಹೆ ಮಾಡಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಗುರುವಾರ ಬಾಲಭವನ ಆವರಣದಲ್ಲಿ ಏರ್ಪಡಿ­ಸಿದ್ದ ಸ್ತ್ರೀಶಕ್ತಿ ಮಹಿಳಾ ಸ್ವಸಹಾಯ ಸಂಘಗಳು ಉತ್ಪಾದಿಸಿದ ವಸ್ತುಗಳ ವಸ್ತುಪ್ರದರ್ಶನ ಮತ್ತು ಮಾರಾಟ ಮೇಳ- ಉದ್ಘಾಟಿಸಿ ಮಾತನಾಡಿದರು.

ಮಹಿಳೆಯರನ್ನು ಸ್ವಾವಲಂಬಿ­ಗಳ­ನ್ನಾಗಿಸುವ ನಿಟ್ಟಿನಲ್ಲಿ ಬ್ಯಾಂಕ್‌ಗಳು ಸಾಲ ಸೌಲಭ್ಯ ಒದಗಿಸುತ್ತಿವೆ. ಹಪ್ಪಳ, ಉಪ್ಪಿನಕಾಯಿ ತಯಾರಿಕೆ, ಕಸೂತಿ ಕೆಲಸ ಸೇರಿದಂತೆ ಆಸಕ್ತಿ ಇರುವ ಕ್ಷೇತ್ರ­ದಲ್ಲಿ ತೊಡಗಿಸಿಕೊಳ್ಳಬೇಕು. ಈ ಮೂಲಕ ಸಮಾಜದಲ್ಲಿ ತಾವು ಯಾರಿಗೂ ಕಡಿಮೆ ಇಲ್ಲ ಎಂಬುದನ್ನು ಸಾಧಿಸಬೇಕು ಎಂದು ಹೇಳಿದರು.

ಜಿ.ಪಂ. ಸ್ಥಾಯಿ ಸಮಿತಿ ಅಧ್ಯಕ್ಷ ವೈ.ಎಚ್‌.ಹುಚ್ಚಯ್ಯ ಮಾತನಾಡಿ, ಮಹಿಳೆಯರ ಅಭಿವೃದ್ಧಿಗಾಗಿ ಸಾಕಷ್ಟು ಯೋಜನೆಗಳಿವೆ. ಇಂತಹ ಯೋಜನೆ­ಗಳ ಪ್ರಯೋಜನ ಪಡೆಯಬೇಕು. ಮಹಿಳೆಯರು ಸ್ವಾವಲಂಬಿಗಳಾದರೆ ಕುಟುಂಬ ನಿರ್ವಹಣೆ ಸುಲಭವಾಗುತ್ತದೆ ಎಂದರು.

ಜಿಲ್ಲಾ ಪಂಚಾಯಿತಿ ಸದಸ್ಯ ಸಿ.ಆರ್‌.ಉಮೇಶ್‌, ಸಿಇಒ ಗೋವಿಂದ­ರಾಜು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕಿ ಸುಜಾತಾ, ಸಿಡಿಪಿಒ ನಟರಾಜು, ಶಶಿಕುಮಾರ್‌ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT