ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಿಳೆಯರಿಗೆ ಆರ್ಥಿಕ ಕಾರ್ಯಾಗಾರ

Last Updated 8 ಅಕ್ಟೋಬರ್ 2011, 9:30 IST
ಅಕ್ಷರ ಗಾತ್ರ

ತಿಪಟೂರು: ಸಾಮಾಜಿಕ ಸುಧಾರಣೆಗೆ ಬಹುಮುಖ್ಯ ಪಾತ್ರ ವಹಿಸುವ ಮಹಿಳೆಯರು ಕೀಳರಿಮೆ ತೊರೆದು ಪ್ರಗತಿಪರ ಆಲೋಚನೆ ಮೈಗೂಡಿಸಿ ಕೊಳ್ಳಬೇಕು ಎಂದು ಸರ್ಕಾರಿ ಸಹಾಯಕ ಅಭಿಯೋಜಕಿ ಆಶಾಕಿರಣ್ ಅಭಿಪ್ರಾಯಪಟ್ಟರು.

ನಗರದ ಅಂಬೇಡ್ಕರ್ ಭವನದಲ್ಲಿ ಗ್ರಾಮೀಣ ಕೂಟದಿಂದ ಈಚೆಗೆ ನಡೆದ ಸಾಮಾಜಿಕ ಮತ್ತು ಆರ್ಥಿಕಾಭಿವೃದ್ಧಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು, ಕುಟುಂಬ ಮತ್ತು ಸಮಾಜದ ಸುಧಾರಣೆಗೆ ಮಹಿಳೆಯರ ಜೀವನ ಮಟ್ಟವೇ ಮಾನದಂಡ. ಮಹಿಳೆಯರು ಲಭ್ಯ ಅವಕಾಶ ಬಳಸಿಕೊಂಡು ಮುಂಚೂಣಿಗೆ ಬರಬೇಕು ಎಂದರು.

ತಾಲ್ಲೂಕು ವೈದ್ಯಾಧಿಕಾರಿ ಡಾ. ಶೈಲಕುಮಾರ್ ಮಾತನಾಡಿದರು. ನವ್ಯ ದಿಶಾ ಸಂಸ್ಥೆಯ ಮಹಾಂತೇಶ್ ಅಧ್ಯಕ್ಷತೆ ವಹಿಸಿದ್ದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿ ಪ್ರೇಮಾ, ಸಮಾಜ ಕಲ್ಯಾಣ ಇಲಾಖೆಯ ಆದಿಲಕ್ಷ್ಮಮ್ಮ, ವಿ.ಆರ್. ಪರಮೇಶ್ ಮತ್ತಿತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT