ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾಚೇನಹಳ್ಳಿ: ಗ್ರಾಮ ಪಂಚಾಯಿತಿ ಕಟ್ಟಡ ಉದ್ಘಾಟನೆ

Last Updated 15 ಸೆಪ್ಟೆಂಬರ್ 2011, 5:40 IST
ಅಕ್ಷರ ಗಾತ್ರ

ಶಿರಹಟ್ಟಿ: ಗ್ರಾಮಗಳು ಸುಧಾರಣೆ ಆದರೆ ಮಾತ್ರ ದೇಶ ಪ್ರಗತಿ ಹೊಂದಲು ಸಾಧ್ಯ ಎಂದು ನುಡಿದ ರಾಷ್ಟ್ರಪಿತ ಮಹಾತ್ಮಾ ಗಾಂಧಿಯವರು ಕಂಡ ಕನಸು ನನಸಾಗಬೇಕಾದರೆ ಸರ್ಕಾರದ ಯೋಜನೆಗಳನ್ನು ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಪ್ರಾಮಾಣಿಕವಾಗಿ ಜನರಿಗೆ ತಲುಪಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ. ಪಾಟೀಲ ಹೇಳಿದರು.

ತಾಲ್ಲೂಕಿನ ಮಾಚೇನಹಳ್ಳಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣಗೊಂಡ ಗ್ರಾಮ ಪಂಚಾಯ್ತಿ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದರು.ಅಭಿವೃದ್ದಿ ವಿಷಯಯದಲ್ಲಿ ರಾಜಕೀಯವನ್ನು ಬೆರಸದೇ ಪಕ್ಷಾತೀತವಾಗಿ ಜನತೆಯ ಕೆಲಸಗಳನ್ನು ಮಾಡಬೇಕು. ಗ್ರಾಮಗಳ ಅಭಿವೃದ್ದಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಸಾಕಷ್ಟು ಯೋಜನೆಗಳನ್ನು ಜಾರಿಗೆಗೊಳಿಸಿದ್ದು, ಅವುಗಳ ಸದುಪಯೋಗ ಪಡೆಯಬೇಕೆಂದು ಸಲಹೆ ನೀಡಿದರು.

ವಿಧಾನ ಪರಿಷತ್ ಸದಸ್ಯ ಶ್ರೀನಿವಾಸ ಮಾನೆ ಲೋಕ ಶಿಕ್ಷಣ ಕೇಂದ್ರ ಮತ್ತು ರಂಗಮಂದಿರದ ಶಿಲಾನ್ಯಾಸವನ್ನು ಉದ್ಘಾಟಿಸಿ ಮಾತನಾಡಿ,ಎಲ್ಲರಿಗೂ ಶಿಕ್ಷಣ ಅಗತ್ಯವಾಗಿದ್ದು, ದೇಶಕ್ಕೆ ಶಾಪವಾದ ಅನಕ್ಷರತೆಯನ್ನು ತೊಲಗಿ ಸುವಲ್ಲಿ ಎಲ್ಲರೂ ಪಾಲ್ಗೊಳ್ಳಬೇಕೆಂದು ಹೇಳಿದರು.       

ಶಾಸಕ ರಾಮಣ್ಣ ಲಮಾಣಿ, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಚಂಬವ್ವ ಪಾಟೀಲ, ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಎಂ.ಎಸ್. ದೊಡ್ಡಗೌಡರ, ಸದಸ್ಯೆ ಕಮಲಮ್ಮ ಮಲ್ಲೇಶಪ್ಪ ಸಜ್ಜನರ, ತಾಲ್ಲೂಕು ಪಂಚಾಯ್ತಿ ಸದಸ್ಯೆ ಸುಷ್ಮಾ ಸೊರಟೂರ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲಕ್ಷ್ಮೀದೇವಿ ಮಾದರ, ಉಪಾಧ್ಯಕ್ಷ ಬಸವಂತಪ್ಪ ಕೊಡ್ಲಿ, ಮಾಜಿ ಶಸಕರಾದ ಎಸ್.ಎನ್. ಪಾಟೀಲ, ಜಿ.ಎಸ್. ಗಡ್ಡದೇವರಮಠ, ಸಣ್ಣವೀರಪ್ಪ ಹಳ್ಳೆಪ್ಪನವರ, ವಿ.ಎಸ್.ಎಸ್. ಬ್ಯಾಂಕ್ ಉಪಾಧ್ಯಕ್ಷ ಬಸನಗೌಡ ಪಾಟೀಲ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಶಿವಪುತ್ರಪ್ಪ ಮಾದರ, ತಹಸೀಲ್ದಾರ್ ಆರ್.ಡಿ. ಉಪ್ಪಿನ, ಆರ್. ಶ್ರೀನಿವಾಸ ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿಗಳಾದ ಸೋಮ ಶೇಖರಗೌಡ ಪಾಟೀಲ ಉಪಸ್ಥಿತರಿದ್ದರು.

ಗ್ರಾಮ ಪಂಚಾಯಿತಿ ಕಟ್ಟಡಕ್ಕೆ ಭೂದಾನ ನೀಡಿದ ಸೋಮರೆಡ್ಡಿ ಬಸವರೆಡ್ಡಿ ತಾರಿಕೊಪ್ಪ ಅವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು ಗ್ರಾ.ಪಂ. ಸದಸ್ಯ ಶಂಕರ ಮರಾಠೆ ಮಾತನಾಡಿದರು ಪ್ರಕಾಶ ಆಡೂರ ನಿರೂಪಿಸಿದರು. ಶರಣಪ್ಪ ಆಡೂರ ವಂದಿಸಿದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT