ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾಜಿ ಶಾಸಕ ವಿಠಲ ಹೇರೂರ

Last Updated 3 ಡಿಸೆಂಬರ್ 2013, 19:30 IST
ಅಕ್ಷರ ಗಾತ್ರ

ಗುಲ್ಬರ್ಗ: ಕೋಲಿ ಸಮಾಜದ ನಾಯಕ, ವಿಧಾನ ಪರಿಷತ್ ಮಾಜಿ ಸದಸ್ಯ ವಿಠಲ ಹೇರೂರ (60) ನಗರದ ಖಾಸಗಿ ಆಸ್ಪತ್ರೆಯಲ್ಲಿ ಮಂಗಳವಾರ ಬೆಳಗಿನ ಜಾವ ನಿಧನರಾದರು.

ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಹೇರೂರ ಒಂದು ವಾರದಿಂದ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆಗೆ ಸ್ಪಂದಿಸದೆ ಬೆಳಿಗ್ಗೆ 2.30 ಗಂಟೆಗೆ ಕೊನೆ ಯುಸಿರೆಳೆದರು. ಇವರು ಶೋಷಿತರ ಪರವಾದ ಹೋರಾಟದಲ್ಲೇ ತಮ್ಮನ್ನು ತೊಡಗಿಸಿಕೊಂಡಿದ್ದರು.

ಡಿ. 4 ರಂದು ಮಧ್ಯಾಹ್ನ 1 ಗಂಟೆಗೆ ಅಫಜಲಪುರ ತಾಲ್ಲೂಕು ದೇವಲಗಾಣಗಾಪುರದಲ್ಲಿರುವ ತಿಪ್ಪಣ್ಣ ಕಂಠೆಪ್ಪ ಹೇರೂರ ಪ್ರೌಢ ಶಾಲೆ ಆವರಣದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT