ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾಜಿ ಸಚಿವ ಎಚ್.ಶಿವಪ್ಪ ನಿಧನ

Last Updated 5 ಆಗಸ್ಟ್ 2013, 19:59 IST
ಅಕ್ಷರ ಗಾತ್ರ

ದಾವಣಗೆರೆ: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಚಿವ ಎಚ್.ಶಿವಪ್ಪ (77)ನಗರದ ಪಿ.ಜೆ. ಬಡಾವಣೆಯ ತಮ್ಮ ನಿವಾಸದಲ್ಲಿ  ಸೋಮವಾರ ಬೆಳಿಗ್ಗೆ ನಿಧನರಾದರು.

ಮೂತ್ರಪಿಂಡ ವೈಫಲ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರು, 2ವರ್ಷಗಳಿಂದ ಹಾಸಿಗೆ ಹಿಡಿದಿದ್ದರು ಎಂದು ಕುಟುಂಬದ ಮೂಲಗಳು ತಿಳಿಸಿವೆ. 

ಶಿವಪ್ಪ ಅವರಿಗೆ ಹರಿಹರ ಕ್ಷೇತ್ರದ ಶಾಸಕರೂ ಆಗಿರುವ ಜೆಡಿಎಸ್ ಮುಖಂಡ ಎಚ್.ಎಸ್.ಶಿವಶಂಕರ್ ಸೇರಿದಂತೆ ಮೂವರು ಪುತ್ರರು, ಪುತ್ರಿ ಹಾಗೂ ಪತ್ನಿ ವನಮಾಲಾ ಇದ್ದಾರೆ.

1994ರ ವಿಧಾನಸಭಾ ಚುನಾವಣೆಯಲ್ಲಿ ಪಕ್ಷೇತರರಾಗಿ ಗೆಲುವು ಸಾಧಿಸಿದ್ದ ಶಿವಪ್ಪ ಅವರು ಜೆ.ಎಚ್.ಪಟೇಲ್ ಸಚಿವ ಸಂಪುಟದಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ವಸತಿ ಮತ್ತು ಸಕ್ಕರೆ ಖಾತೆ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು.

ಭದ್ರಾ ಸಹಕಾರಿ ಸಕ್ಕರೆ ಕಾರ್ಖಾನೆ ಆರಂಭಿಸುವಂತೆ ಜಿಲ್ಲೆಯಲ್ಲಿ ನಡೆದ ಹೋರಾಟಗಳಲ್ಲಿ ಶಿವಪ್ಪ ಮುಂಚೂಣಿ ಪಾತ್ರ ವಹಿಸಿದ್ದರು ಎಂದು ಸ್ಮರಿಸುತ್ತಾರೆ ಇಲ್ಲಿನ ನಾಯಕರು. ಹರಿಹರ ತಾಲ್ಲೂಕಿನ ಬನ್ನಿಕೋಡು ಗ್ರಾಮದಲ್ಲಿ ಮಂಗಳವಾರ ಸಂಜೆ 4ಕ್ಕೆ ಅವರ ಅಂತ್ಯಕ್ರಿಯೆ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT