ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾದರಿ ಕ್ಷೇತ್ರ ಗುರಿ

Last Updated 18 ಜನವರಿ 2011, 9:50 IST
ಅಕ್ಷರ ಗಾತ್ರ

ಕೊರಟಗೆರೆ: ಹೊಳವನಹಳ್ಳಿ ಜಿಲ್ಲಾ ಪಂಚಾಯಿತಿ ಸದಸ್ಯೆ ದಾಕ್ಷಾಯಿಣಿ ರಾಜಣ್ಣ ಅವರೊಂದಿಗೆ ‘ಪ್ರಜಾವಾಣಿ’ ನಡೆಸಿದ ಸಂದರ್ಶನ.
* ರಾಜಕೀಯ ಪ್ರವೇಶಕ್ಕೆ ಪ್ರೇರಣೆ?
ನನ್ನ ಪತಿ ಎಲ್.ರಾಜಣ್ಣ ಗ್ರಾಮ ಪಂಚಾಯಿತಿ ಸದಸ್ಯರಾಗಿ, ಜೆಡಿಎಸ್ ಅಧ್ಯಕ್ಷರಾಗಿ ಸ್ಥಳೀಯ ಜನರ ಸಂಕಷ್ಟಕ್ಕೆ ಸ್ಪಂದಿಸುತ್ತಿದ್ದರು. ಅವರ ಸಲಹೆ ಹಾಗೂ ಸಹಕಾರದಿಂದ ರಾಜಕೀಯಕ್ಕೆ ಬರಬೇಕಾಯಿತು.

* ಕ್ಷೇತ್ರದಲ್ಲಿ ಆದ್ಯತೆ?
ಹೊಳವನಹಳ್ಳಿ ಹಾಗೂ ಸುತ್ತಮುತ್ತಲ ಪ್ರದೇಶ ತೀರಾ ಹಿಂದುಳಿದ ಗ್ರಾಮಗಳನ್ನು ಹೊಂದಿದೆ. ಕುಡಿಯುವ ನೀರು, ಒಳಚರಂಡಿ ಸೇರಿದಂತೆ ಎಲ್ಲ ಹಳ್ಳಿಗಳ ಮೂಲಸಮಸ್ಯೆ ಗಳನ್ನು ಹಂತಹಂತವಾಗಿ ಬಗೆಹರಿಸಲಾಗುವುದು.

* ಕ್ಷೇತ್ರ ಅಭಿವೃದ್ಧಿ ಕಲ್ಪನೆ?
ಕ್ಷೇತ್ರದ ಎಲ್ಲ ರಸ್ತೆಗಳು ತೀರಾ ಹಾಳಾಗಿವೆ. ಪಂಪ್‌ಸೆಟ್‌ಗಳಲ್ಲಿ ನೀರಿದ್ದರೂ ವಿದ್ಯುತ್ ಸಮಸ್ಯೆಯಿಂದ ರೈತರು ಬಳಲುತ್ತಿದ್ದಾರೆ. ಕೃಷಿ ಪ್ರಧಾನವಾದ ಕ್ಷೇತ್ರದಲ್ಲಿ ಕೃಷಿಗೆ ಆದ್ಯತೆ ನೀಡಿ ರೈತರ ಸಂಕಷ್ಟಗಳಿಗೆ ಸ್ಪಂದಿಸುವುದು ಮುಖ್ಯ.

* ಕ್ಷೇತ್ರದ ಅರಿವು?
ಈಗಾಗಲೇ ಕ್ಷೇತ್ರದಲ್ಲಿ ಪ್ರವಾಸ ಮಾಡಿ ಸಮಸ್ಯೆಗಳ ಬಗ್ಗೆ ತಿಳಿದುಕೊಂಡಿದ್ದೇನೆ. ಸಮಸ್ಯೆಗಳನ್ನು ಬಗೆಹರಿಸಲು ಪ್ರಾಮಾಣಿ ಪ್ರಯತ್ನ ನಡೆಸುತ್ತೇನೆ.

* ಮಹಿಳೆಯರಿಗೆ ನಿಮ್ಮ ಕೊಡುಗೆ?
ಸ್ತ್ರೀಶಕ್ತಿ ಸಂಘಗಳು ಹಾಗೂ ಸ್ವಸಹಾಯ ಸಂಘಗಳ ಚಟುವಟಿಕೆ ಗಳಿಗೆ ಆದ್ಯತೆ ನೀಡಿ ಗ್ರಾಮಾಭಿವೃದ್ಧಿ ಯೋಜನೆ ಗುಂಪುಗಳಿಗೆ ಮಾನ್ಯತೆ ನೀಡುವ ಉದ್ದೇಶವಿದೆ.

* ಸಮಸ್ಯೆಗಳಿಗೆ ಪರಿಹಾರ?
ಗಂಭೀರ ಸಮಸ್ಯೆಗಳ ಪರಿಹಾರಕ್ಕೆ ಆದ್ಯತೆ ನೀಡುತ್ತೇನೆ. ಕ್ಷೇತ್ರದ ಕಾರ್ಯಕರ್ತರು, ಮುಖಂಡರ ಸಹಕಾರದೊಂದಿಗೆ ಕ್ಷೇತ್ರದ ಸರ್ವತೋಮುಖ ಬೆಳವಣಿಗೆಗೆ ಶಕ್ತಿ ಮೀರಿ ಜಿ.ಪಂ. ಅನುದಾನವನ್ನು ತರುವ ಜೊತೆಗೆ ಸರ್ಕಾರದ ವಿಶೇಷ ಅನುದಾನ ತರಲು ಶ್ರಮವಹಿಸುತ್ತೇನೆ. ಮೊದಲ ಬಾರಿಗೆ ಆಯ್ಕೆ ಮಾಡಿರುವ ಹೊಳವನಹಳ್ಳಿ ಕ್ಷೇತ್ರವನ್ನು ಮಾದರಿ ಕ್ಷೇತ್ರ ಮಾಡುವ ಮೂಲಕ ಮತದಾರರ ಋಣ ತೀರಿಸುವುದು ಗುರಿ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT