ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾನವ ಹಕ್ಕು ಕಲಿಕೆ ಕಡ್ಡಾಯ

Last Updated 14 ಜನವರಿ 2012, 19:30 IST
ಅಕ್ಷರ ಗಾತ್ರ

ಪುಣೆ (ಪಿಟಿಐ): ಸ್ನಾತಕೋತ್ತರ ಪದವಿ ಶಿಕ್ಷಣದ ಎಲ್ಲಾ ವಿಭಾಗಗಳಲ್ಲಿ `ಮಾನವ ಹಕ್ಕುಗಳು ಮತ್ತು ಕರ್ತವ್ಯಗಳು~ ಕೋರ್ಸ್‌ನ್ನು ಪುಣೆ ವಿಶ್ವವಿದ್ಯಾಲಯ ಕಡ್ಡಾಯಗೊಳಿಸಿದೆ. ಪಠ್ಯಗಳಲ್ಲಿ ಮಾನವ ಹಕ್ಕುಗಳ ಅಧ್ಯಯನವನ್ನು ಕಡ್ಡಾಯಗೊಳಿಸುವಂತೆ  ರಾಜ್ಯ ಸರ್ಕಾರ ಇತ್ತೀಚೆಗಷ್ಟೇ ವಿಶ್ವವಿದ್ಯಾಲಯಗಳಿಗೆ ನಿರ್ದೇಶಿಸಿತ್ತು.

`ವಿದ್ಯಾರ್ಥಿ ಸಮುದಾಯಗಳಲ್ಲಿ ಮಾನವ ಹಕ್ಕುಗಳು ಮತ್ತು ಮೌಲ್ಯಗಳ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಈ ಕೋರ್ಸ್ ಜಾರಿಗೆ ತರಲಾಗಿದೆ.  ಈ ಕೋರ್ಸ್, ಪ್ರತಿ ಸೆಮಿಸ್ಟರ್‌ನಲ್ಲಿ 15 ತರಗತಿಗಳನ್ನು ಹೊಂದಿರುತ್ತದೆ ಎಂದು ಕಾಲೇಜು ಮತ್ತು ವಿಶ್ವವಿದ್ಯಾಲಯ ಅಭಿವೃದ್ಧಿ ಮಂಡಳಿಯ (ಬಿಯುಸಿಡಿ) ನಿರ್ದೇಶಕ ವಾಸುದೇವ ಗಾಡೆ ಹೇಳಿದ್ದಾರೆ.

ಪ್ರಾರಂಭಿಕ ಹಂತವಾಗಿ ಸ್ವಾತೋತ್ತರ ಶಿಕ್ಷಣದಲ್ಲಿ ಮಾತ್ರ ಈ ಕೋರ್ಸ್ ಕಡ್ಡಾಯಗೊಳಿಸಲಾಗಿದ್ದು, ಮುಂದಿನ ಹಂತಗಳಲ್ಲಿ ಪದವಿ ಶಿಕ್ಷಣದಲ್ಲೂ ಜಾರಿಗೆ ತರಲಾಗುವುದು ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT