ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾನವೀಯ ಸಂಬಂಧ ಉಳಿಸಿಕೊಳ್ಳಲು ಸಲಹೆ

Last Updated 7 ಅಕ್ಟೋಬರ್ 2012, 19:30 IST
ಅಕ್ಷರ ಗಾತ್ರ

ಗೋಣಿಕೊಪ್ಪಲು: ಜಾತಿ, ಧರ್ಮಗಳ ಆಧಾರದ ಮೇಲೆ ಸಮಾಜ ವಿಘಟನೆಗೊಳ್ಳುತ್ತಿದ್ದು, ಪರಸ್ಪರ ವಿಶ್ವಾಸ ಇಲ್ಲದಂತಾಗಿದೆ. ಇಂತಹ ವಾತಾವರಣವನ್ನು ಬದಲಾಯಿಸುವ ನಿಟ್ಟಿನಲ್ಲಿ ಮಾನವೀಯ ಸಂಬಂಧಗಳನ್ನು ಕಾಪಾಡುವ ಅಗತ್ಯವಿದೆ ಎಂದು ಪೊನ್ನಂಪೇಟೆ ರಾಮಕೃಷ್ಣ ಶಾರದಾಶ್ರಮದ ಜಗದಾತ್ಮಾನಂದ ಸ್ವಾಮೀಜಿ ಸಲಹೆ ನೀಡಿದರು.

ಪೊನ್ನಂಪೇಟೆ ಸರ್ಕಾರಿ ಪದವಿಪೂರ್ವ ಕಾಲೇಜು ವತಿಯಿಂದ ಕಿರುಗೂರಿನಲ್ಲಿ ಭಾನುವಾರ ಏರ್ಪಡಿಸಿದ್ದ ಎನ್‌ಎಸ್‌ಎಸ್ ಘಟಕದ ವಾರ್ಷಿಕ ಶಿಬಿರ ಉದ್ಘಾಟಿಸಿ ಮಾತನಾಡಿದರು.

ಸಮಾಜದಲ್ಲಿ ಹಿಂಸೆ, ಮೋಸ, ವಂಚನೆ ಪ್ರಕರಣಗಳು ಹೆಚ್ಚಾಗುತ್ತಿವೆ. ಪರಸ್ಪರರನ್ನು ಪ್ರೀತಿ, ವಿಶ್ವಾಸದಿಂದ ಕಾಣುವ ಮನೋಭಾವ ಕಡಿಮೆಯಾಗುತ್ತಿದೆ ಇಂತಹ ರಾಷ್ಟ್ರೀಯ ಸೇವಾ ಯೋಜನೆ ಕಾರ್ಯಕ್ರಮಗಳ ಮೂಲಕ ಸೇವೆ ಮಾಡಬೇಕು ಎಂದು ಸಲಹೆ ನೀಡಿದರು. 

 ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಅಡ್ಡಂಡ ಕಾರ್ಯಪ್ಪ, ಪೊನ್ನಂಪೇಟೆ ಕೊಡವ ಸಮಾಜದ ಅಧ್ಯಕ್ಷ ಚೆಪ್ಪುಡೀರ ಪೊನ್ನಪ್ಪ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕಿರುಗುರ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರೀಟಾ ಪೂಣಚ್ಚ, ಉಪಾಧ್ಯಕ್ಷ ಕಿಶೋರ್, ಮುಖ್ಯ ಶಿಕ್ಷಕಿ ಮೀನಾಕ್ಷಿ, ಪೊನ್ನಂಪೇಟೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಪಂದ್ಯಂಡ ಹರೀಶ್, ಮುಖಂಡ ಕೆ.ರಾಜಪ್ಪ, ಶಿಬಿರದ ನಿರ್ದೇಶಕ ಡಾ.ಬಿ.ಎಸ್. ಪ್ರಭು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT