ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾನಸಿಕ ನೆಮ್ಮದಿ, ಶಾಂತಿ ಮುಖ್ಯ

Last Updated 15 ಫೆಬ್ರುವರಿ 2012, 6:15 IST
ಅಕ್ಷರ ಗಾತ್ರ

ಪಿರಿಯಾಪಟ್ಟಣ: ಸಮಾಜದಲ್ಲಿರುವ ಕೆಲವು ಕಟು ಸತ್ಯವನ್ನು ಅರ್ಥ ಮಾಡಿಕೊಳ್ಳಲು ಜನರಿಗೆ ಇನ್ನೂ  ಸಾಧ್ಯವಾಗಿಲ್ಲ ಎಂದು ಚಿತ್ರದುರ್ಗ ಬೃಹನ್ಮಠದ ಶಿವಮೂರ್ತಿ ಮುರುಘ ರಾಜೇಂದ್ರ ಶರಣರು ಅಭಿಪ್ರಾಯಪಟ್ಟರು.

ತಾಲ್ಲೂಕಿನ ರಾವಂದೂರು ಮುರುಘಮಠದಲ್ಲಿ ಭಾನುವಾರ ನಡೆದ ಜಗದ್ಗುರು ಮಲ್ಲಿಕಾರ್ಜುನ ಸ್ಮರಣೋತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ಜನರ ಮನಸ್ಸಿನಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗುತ್ತಿದ್ದು, ಇದಕ್ಕೆ ವಿಜ್ಞಾನವು ಯಾವುದೆ  ಔಷಧವನ್ನು ಕಂಡುಹಿಡಿದಿಲ್ಲ. ಮನಸ್ಸಿಗೆ ನೆಮ್ಮದಿ ಮತ್ತು ಶಾಂತಿ ಮುಖ್ಯ ಎಂದರು.

ಇಂದಿನ ಯುವಕರ ಬುದ್ಧಿ ಶಕ್ತಿ ದೃಶ್ಯಮಾಧ್ಯಮದಿಂದ ಹಾಳಾಗುತ್ತಿವೆ, ಆದರೆ ಇವು ಉತ್ತಮ ಸಮಾಜ ನಿರ್ಮಾಣ ಮಾಡುವ ಕೆಲಸಕ್ಕೆ ಬಳಕೆ ಯಾಗಬೇಕು ಎಂದು ತಿಳಿಸಿದರು.

ಗಾವಡಗೆರೆ ಮಠದ ನಟರಾಜ ಸ್ವಾಮೀಜಿ ಮಾತನಾಡಿ ವೀರಶೈವ ಜನಾಂಗದಲ್ಲಿ ಇತ್ತೀಚೆಗೆ ತಾರತಮ್ಯ ಹೆಚ್ಚಾಗುತ್ತಿದ್ದು, ಇದನ್ನು ಸಮಾಜದ ಹಿರಿಯರು ಇದರ ಬಗ್ಗೆ ಅರಿವು ಮೂಡಿಸುವ ಅವಶ್ಯಕತೆಯಿದೆ ಎಂದರು. ಪೋಷಕರು ತಮ್ಮ ಮಕ್ಕಳನ್ನು ಸುಸಂಸ್ಕೃತರನ್ನಾಗಿ ಮಾಡ ಬೇಕು ಎಂದು ತಿಳಿಸಿದರು.

ಮಾಜಿ ಶಾಸಕ ಹೆಚ್.ಸಿ.ಬಸವರಾಜು ಮಾತನಾಡಿ 12ನೇ ಶತಮಾನದಲ್ಲಿ ಜೀವಿಸಿದ್ದ ಬಸವಣ್ಣನವರ ತತ್ವಗಳು ಪ್ರಸ್ತುತ ಸಮಾಜಕ್ಕೆ ಅಗತ್ಯವಾಗಿದೆ ಎಂದರು. ವೀರಶೈವ ಸಮಾಜ ಇಂದಿಗೂ ಶೋಷಣೆಗೆ ಒಳಗಾಗಿದ್ದು ಮಠ ಮಾನ್ಯಗಳಿಗೆ ಸರ್ಕಾರ ನೀಡುತ್ತಿರುವ ಉತ್ತೇಜನ ಮುಂದುವರಿಸುವ  ಅಗತ್ಯವಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಚಿತ್ರದುರ್ಗದ ಜಮುರಾ ಕಲಾ ತಂಡದಿಂದ ಯುಡಿಯೂರು ಸಿದ್ದಲಿಂಗೇಶ್ವರ ನಾಟಕ ಪ್ರದರ್ಶನ ಏರ್ಪಡಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಹೆಬ್ಬಾಳು ವಿರಕ್ತ ಮಠದ ಮಹಾಂತ ಸ್ವಾಮೀಜಿ , ಲಾಲನಹಳ್ಳಿ ಮಠದ ಜಯದೇವಿತಾಯಿ, ಉಪನ್ಯಾಸಕ ಚಂದ್ರಕಾಂತ ಹೀರೇಮಠ, ತಾಲ್ಲೂಕು ಪಂಚಾಯಿತಿ ಸದಸ್ಯ ಆರ್.ಸಿ.ಚಂದ್ರು, ವೀರಶೈವ ಸಮಾಜದ ಅಧ್ಯಕ್ಷ ಸಿ.ಸಿ. ಸದಾಶಿವಪ್ಪ, ಶರಣ ಸಾಹಿತ್ಯವೇದಿಕೆ ಅಧ್ಯಕ್ಷ ಎ.ಟಿ.ವಿರೋಪಾಕ್ಷ, ಮುಖಂಡ ಹೊಲದಪ್ಪ ಮತ್ತಿತರರು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT