ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾಯಾವತಿ ಅಕ್ರಮ ಸಂಪತ್ತು: ಸುಪ್ರೀಂ ಸ್ಪಷ್ಟನೆ, ನೋಟಿಸ್ ಜಾರಿ

Last Updated 9 ಅಕ್ಟೋಬರ್ 2012, 10:35 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ):  ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮಾಯಾವತಿ ಅವರ ಅಕ್ರಮ ಸಂಪತ್ತು ಗಳಿಕೆ ಸಂಬಂಧಿತ ಖಟ್ಲೆಯನ್ನು ರದ್ದು ಪಡಿಸಿದ ತನ್ನ ತೀರ್ಪಿನ ಬಗ್ಗೆ ಸ್ಪಷ್ಟನೆ ಕೇಳಿದ  ಮನವಿಯ ಮೇರೆಗೆ ಸುಪ್ರೀಂಕೋರ್ಟ್ ಮಂಗಳವಾರ ಮಾಯಾವತಿ, ಕೇಂದ್ರ ಸರ್ಕಾರ  ಮತ್ತು ಸಿಬಿಐಗೆ ನೋಟಿಸ್ ಜಾರಿ ಮಾಡಿತು.

~ನಾವು ಯಾರನ್ನೂ ರಕ್ಷಿಸಲು ಯತ್ನಿಸುತ್ತಿಲ್ಲ~ ಎಂದು ಅಕ್ರಮ ಸಂಪತ್ತು ಗಳಿಕೆ ಪ್ರಕರಣವನ್ನು ಉಲ್ಲೇಖಿಸುತ್ತಾ ಸುಪ್ರೀಂಕೋರ್ಟ್ ಸ್ಪಷ್ಟನೆ ನೀಡಿತು.

ಮಾಯಾವತಿ ಅವರ ವಿರುದ್ಧದ ಅಕ್ರಮ ಸಂಪತ್ತು ಗಳಿಕೆ ಪ್ರಕರಣದ ವಿಚಾರಣೆ ನಡೆಸಲು ಸಿಬಿಐ ಮುಕ್ತವಾಗಿದೆ ಎಂದು ತನ್ನ ತೀರ್ಪಿನ ಬಗ್ಗೆ ಸ್ಪಷ್ಟನೆ ನೀಡುತ್ತಾ ಸುಪ್ರೀಂಕೋರ್ಟ್ ಹೇಳಿತು.

ಅಕ್ರಮ ಸಂಪತ್ತು ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಯಾವತಿ ವಿರುದ್ಧ ಸಲ್ಲಿಸಲಾಗಿದ್ದ ಪ್ರಥಮ ಮಾಹಿತಿ ವರದಿ (ಎಫ್ ಐಆರ್) ರದ್ದು ಪಡಿಸಿದ ತನ್ನ ಹಿಂದಿ ತೀರ್ಪಿನ ಪುನರ್ ಪರಿಶೀಲನೆ ಕೋರಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂಕೋರ್ಟ್ ಅಂಗೀಕರಿಸಿತು.

ಪುನರ್ ಪರಿಶೀಲನಾ ಅರ್ಜಿಯ ವಿಚಾರಣೆ ಕಾಲದಲ್ಲಿ ತನ್ನ ತೀರ್ಪಿನ ಬಗ್ಗೆ ಸ್ಪಷ್ಟನೆ ನೀಡಲು ಸಿದ್ಧ ಎಂಬುದಾಗಿ ಪದೇ ಪದೇ ಹೇಳಿದ  ಸುಪ್ರೀಂಕೋರ್ಟ್ ಅಕ್ರಮ ಸಂಪತ್ತು ಗಳಿಕೆ ಪ್ರಕರಣದ ತನಿಖೆ ಮುಂದುವರಿಸಿ ತಾರ್ಕಿಕ ಅಂತ್ಯ ನೀಡಲು ತನ್ನ ತೀರ್ಪು ಸಿಬಿಐಗೆ ಅಡ್ಡಿಯಲ್ಲ ಎಂದು ಹೇಳಿತು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT