ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾಹಿತಿ ತಂತ್ರಜ್ಞಾನದಿಂದ ಪ್ರಕರಣ ತ್ವರಿತ ವಿಲೇವಾರಿ

Last Updated 18 ಅಕ್ಟೋಬರ್ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು: ಮಾಹಿತಿ ತಂತ್ರಜ್ಞಾನವನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳುವುದರಿಂದ ಪ್ರಕರಣಗಳ ತ್ವರಿತ ವಿಲೇವಾರಿ ಸಾಧ್ಯ ಎಂದು ಸುಪ್ರೀಂ ಕೋರ್ಟ್‌ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ಎಸ್. ರಾಜೇಂದ್ರ ಬಾಬು ಅಭಿಪ್ರಾಯಪಟ್ಟರು.

ಕರ್ನಾಟಕ ನ್ಯಾಯಾಂಗ ಅಕಾಡೆಮಿ ನ್ಯಾಯಾಂಗದ ಅಧಿಕಾರಿಗಳಿಗೆ ಆರಂಭಿಸಿರುವ ಸಹಾಯವಾಣಿಗೆ ಗುರುವಾರ ಇಲ್ಲಿ ಚಾಲನೆ ನೀಡಿ ಮಾತನಾಡಿದ ಅವರು, `ನ್ಯಾಯಾಧೀಶರು ಕಾನೂನಿನ ನೆಲೆಯಲ್ಲಿ ಮಾನವೀಯ ತೀರ್ಪು ನೀಡಬೇಕು~ ಎಂದು ಹೇಳಿದರು.

ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ವಿಕ್ರಮಜಿತ್ ಸೇನ್ ಮಾತನಾಡಿ, `ಕಾನೂನು ವಿಚಾರದಲ್ಲಿ ಎದುರಾಗುವ ಗೊಂದಲಗಳನ್ನು ನಿವಾರಿಸುವಲ್ಲಿ ನ್ಯಾಯಾಧೀಶರಿಗೂ ಈ ಸಹಾಯವಾಣಿ ನೆರವು ನೀಡಲಿದೆ~ ಎಂಬ ಆಶಯ ವ್ಯಕ್ತಪಡಿಸಿದರು.

`ಅಧೀನ ನ್ಯಾಯಾಲಯಗಳು ತಂತ್ರಜ್ಞಾನವನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳುವಲ್ಲಿ ನಮ್ಮ ನಿರೀಕ್ಷೆಗೆ ತಕ್ಕಷ್ಟು ಬೆಳವಣಿಗೆ ಸಾಧಿಸಿಲ್ಲ~ ಎಂದು ಹೈಕೋರ್ಟ್ ನ್ಯಾಯಮೂರ್ತಿ ಎನ್. ಕುಮಾರ್ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT