ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾಹಿತಿ ನೀಡುವಂತೆ ಮಿರ್ಜಿ ಮನವಿ

Last Updated 11 ಜೂನ್ 2011, 19:30 IST
ಅಕ್ಷರ ಗಾತ್ರ

ಬೆಂಗಳೂರು: `ಸರಗಳ್ಳತನ ಸೇರಿದಂತೆ ಯಾವುದೇ ಅಪರಾಧ ನಡೆದ ತಕ್ಷಣ ಪೊಲೀಸ್ ನಿಯಂತ್ರಣ ಕೊಠಡಿಗೆ ಮಾಹಿತಿ ನೀಡುವ ಮೂಲಕ ಆರೋಪಿಗಳನ್ನು ಬಂಧಿಸಲು ಸಹಕಾರ ನೀಡಬೇಕೆಂದು~ ನಗರ ಪೊಲೀಸ್ ಕಮಿಷನರ್ ಜ್ಯೋತಿಪ್ರಕಾಶ್ ಮಿರ್ಜಿ ಅವರು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.

`ಸರ ದೋಚಿದ ನಂತರ ನಿಯಂತ್ರಣ ಕೊಠಡಿಗೆ ಮಾಹಿತಿ ನೀಡಿದರೆ ಎಲ್ಲ ಠಾಣೆಗಳಿಗೂ ಈ ಬಗ್ಗೆ ಸಂದೇಶ ರವಾನಿಸಿ ಸರಗಳ್ಳರ ಬಂಧನಕ್ಕೆ ತಕ್ಷಣ ಕ್ರಮ ಕೈಗೊಳ್ಳಬಹುದು.

ಆದರೆ ಬಹುತೇಕ ಪ್ರಕರಣಗಳಲ್ಲಿ ಸರ ಕಳೆದುಕೊಂಡ ಮಹಿಳೆಯರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡುತ್ತಿಲ್ಲ. ಆದ್ದರಿಂದ ದುಷ್ಕರ್ಮಿಗಳು ಸುಲಭವಾಗಿ ತಪ್ಪಿಸಿಕೊಳ್ಳುತ್ತಿದ್ದಾರೆ~ ಎಂದು ಮಾಧ್ಯಮ ಪ್ರತಿನಿಧಿಗಳಿಗೆ ಶನಿವಾರ ತಿಳಿಸಿದರು.

`ಯಾವುದೇ ಅಪರಾಧಗಳು ನಡೆಯಲಿ ತಕ್ಷಣ 100 ಸಂಖ್ಯೆಗೆ ಕರೆ ಮಾಡಿ ಮಾಹಿತಿ ನೀಡಿ. ನಿಯಂತ್ರಣ ಕೊಠಡಿಗೆ ಸಂದೇಶ ಬಂದೊಡನೆ ಚೀತಾ, ಹೊಯ್ಸಳ ಸಿಬ್ಬಂದಿಯನ್ನು ಸ್ಥಳಕ್ಕೆ ಕಳುಹಿಸಲಾಗುತ್ತದೆ. ಎಫ್‌ಐಆರ್ ದಾಖಲಿಸಲು ಸೂಚನೆ ನೀಡಲಾಗುತ್ತದೆ. ಸಿಬ್ಬಂದಿ ಪ್ರಕರಣ ದಾಖಲಿಸಿಕೊಳ್ಳದಿದ್ದರೆ ಕ್ರಮ ಕೈಗೊಳ್ಳಲಾಗುತ್ತದೆ~ ಎಂದು ತಿಳಿಸಿದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT