ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಿಂಚಿದ ಸುನಿಲ್‌ ಚೆಟ್ರಿ

ಐ-ಲೀಗ್‌ ಫುಟ್‌ಬಾಲ್‌: ಬಿಎಫ್‌ಸಿಗೆ ಜಯ
Last Updated 1 ಡಿಸೆಂಬರ್ 2013, 19:30 IST
ಅಕ್ಷರ ಗಾತ್ರ

ಬೆಂಗಳೂರು: ನಾಯಕ ಸುನಿಲ್‌ ಚೆಟ್ರಿ ತಂದಿತ್ತ ಎರಡು ಗೋಲುಗಳ ನೆರವಿನಿಂದ ಬೆಂಗಳೂರು ಫುಟ್‌ಬಾಲ್‌ ಕ್ಲಬ್‌ (ಬಿಎಫ್‌ಸಿ) ತಂಡ ಐ-ಲೀಗ್‌ ಟೂರ್ನಿಯ ಪಂದ್ಯದಲ್ಲಿ ಜಯ ಸಾಧಿಸಿತು.

ಬೆಂಗಳೂರು ಫುಟ್‌ಬಾಲ್‌ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಪಂದ್ಯದಲ್ಲಿ ಬಿಎಫ್‌ಸಿ 2-1 ಗೋಲುಗಳಿಂದ ಶಿಲ್ಲಾಂಗ್‌ ಲಜಾಂಗ್‌ ತಂಡವನ್ನು ಮಣಿಸಿತು. ಪಂದ್ಯದ ಏಳು ಹಾಗೂ 34ನೇ ನಿಮಿಷದಲ್ಲಿ ಚೆಂಡನ್ನು ಗುರಿ ಸೇರಿಸಿದ ಚೆಟ್ರಿ ತಂಡದ ಗೆಲುವಿನ ರೂವಾರಿ ಎನಿಸಿಕೊಂಡರು. ಈ ಗೆಲುವಿನ ಮೂ ಲಕ ಬೆಂಗಳೂರಿನ ತಂಡ ಪಾಯಿಂಟ್‌ ಪಟ್ಟಿಯಲ್ಲಿ  ಅಗ್ರಸ್ಥಾನವನ್ನು ಭದ್ರಪಡಿ ಸಿಕೊಂಡಿತು. ಬಿಎಫ್‌ಸಿ 11 ಪಂದ್ಯ ಗಳಿಂದ 21 ಪಾಯಿಂಟ್‌ ಕಲೆಹಾಕಿದೆ.

ಪಂದ್ಯದ ಆರಂಭದಿಂದಲೇ ಪ್ರಭುತ್ವ ಸಾಧಿಸಿದ ಬಿಎಫ್‌ಸಿ ಏಳನೇ ನಿಮಿಷದಲ್ಲಿ ಮುನ್ನಡೆ ಸಾಧಿಸಿತು. ರಾಬಿನ್‌ ಸಿಂಗ್‌ ನೀಡಿದ ಪಾಸ್‌ನಲ್ಲಿ ಚೆಂಡನ್ನು ನಿಯಂತ್ರಣಕ್ಕೆ ಪಡೆದುಕೊಂಡ ಚೆಟ್ರಿ ಯಶಸ್ವಿಯಾಗಿ ಗುರಿ ಸೇರಿಸಿದರು. 34ನೇ ನಿಮಿಷದಲ್ಲಿ ಶಿಲ್ಲಾಂಗ್‌ ತಂಡದ ಸುಭಾಷ್‌ ಸಿಂಗ್ ಅವರು ಚೆಟ್ರಿ ಅವರನ್ನು ಕೆಳಕ್ಕೆ ಬೀಳಿಸಿದ್ದಕ್ಕೆ ರೆಫರಿ ಪೆನಾಲ್ಟಿ ವಿಧಿಸಿದರು. ಪೆನಾಲ್ಟಿ ಅವಕಾಶದಲ್ಲಿ ಚೆಂಡನ್ನು ಗುರಿ ಸೇರಿಸಿದ ಚೆಟ್ರಿ ತಂಡದ ಮುನ್ನಡೆಯನ್ನು 2-0ಗೆ ಹೆಚ್ಚಿಸಿದರು.

ಶಿಲ್ಲಾಂಗ್‌ ತಂಡ ಎರಡನೇ ಅವ ಧಿಯಲ್ಲಿ ಮರುಹೋರಾಟದ ಸೂಚನೆ ನೀಡಿತು. 81ನೇ ನಿಮಿಷದಲ್ಲಿ ಬೊಯಿ ತಂಗ್‌ ಹೊಕಿಪ್‌ ಗೋಲು ಗಳಿಸಿ ಹಿನ್ನಡೆಯನ್ನು 1-2ಕ್ಕೆ ತಗ್ಗಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT