ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಿನಿ ವಿಧಾನಸೌಧ ಕಟ್ಟಡ ಕಾಮಗಾರಿಗೆ ಚಾಲನೆ

Last Updated 10 ಮೇ 2012, 6:20 IST
ಅಕ್ಷರ ಗಾತ್ರ

ಹರಿಹರ: ನಗರದ ಹಳೇ ತಾಲ್ಲೂಕು ಕಚೇರಿಯ ಖಾಲಿ ಜಾಗದಲ್ಲಿ ಕರ್ನಾಟಕ ಗೃಹ ನಿರ್ಮಾಣ ಮಂಡಳಿ ವತಿಯಿಂದ ಬುಧವಾರ ಮಿನಿ ವಿಧಾನಸೌಧ ಕಟ್ಟಡ ಕಾಮಗಾರಿಗೆ ಚಾಲನೆ ದೊರೆಯಿತು.

ಇದೇ ಸಂದರ್ಭದಲ್ಲಿ ಸ್ಥಳ ಪರಿಶೀಲನೆಗೆ ಆಗಮಿಸಿದ ಜಿಲ್ಲಾಧಿಕಾರಿ ಎಸ್.ಎಸ್. ಪಟ್ಟಣಶೆಟ್ಟಿ ಕಾಮಗಾರಿಯ ಭೂಮಿಪೂಜೆಯಲ್ಲಿ ಪಾಲ್ಗೊಂಡರು.

ಮಂಡಳಿಯ ಎಇಇ ಕೃಷ್ಣಮೂರ್ತಿ ಮಾತನಾಡಿ, ಸುಮಾರು 175 ಚದರ ಅಡಿ ವಿಸ್ತೀರ್ಣದಲ್ಲಿ, ್ಙ 2.5 ಕೋಟಿ ವೆಚ್ಚದ ಕಾಮಗಾರಿ 15 ತಿಂಗಳ ಅವಧಿಯಲ್ಲಿ ಪೂರ್ಣಗೊಳ್ಳಲಿದೆ. ಬೆಂಗಳೂರಿನ ಶ್ರೀ ಬಿಲ್ಡರ್ಸ್‌ ಕಾಮಗಾರಿಯ ಗುತ್ತಿಗೆ ಪಡೆದುಕೊಂಡಿದ್ದಾರೆ. ಅವರು ಉತ್ತಮ ಗುಣಮಟ್ಟದ ಕಾಮಗಾರಿ ಮಾಡುತ್ತಾರೆ ಎಂಬ ಭರವಸೆ ಇದೆ ಎಂದು ತಿಳಿಸಿದರು.

ನಂತರ ಪಟ್ಟಣಶೆಟ್ಟಿ ಅವರು, ವಿದ್ಯಾನಗರ ಮತ್ತು ನೀಲಕಂಠನಗರದ ಮಧ್ಯೆ ಇರುವ ನಗರಸಭೆ ಉದ್ಯಾನಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.

ಈ ಉದ್ಯಾನದ ಬಹತೇಕ ಜಾಗವನ್ನು ಖಾಸಗಿ ಸಂಸ್ಥೆಗಳಿಗೆ ಹಂಚಿಕೆ ಮಾಡಲಾಗಿದ್ದು, ಸ್ಥಳದಲ್ಲಿ ಖಾಸಗಿ ಶಾಲೆ, ಮದರಸಾ, ಯುಐಡಿಎಸ್‌ಎಸ್‌ಎಂಟಿ ಮಳಿಗೆಗಳು, ದೇವಸ್ಥಾನ ಹಾಗೂ ನಗರಸಭೆಯ ನೀರು ಸರಬರಾಜು ಟ್ಯಾಂಕ್ ನಿರ್ಮಾಣಗೊಂಡು, ಉದ್ಯಾನ ಅವ್ಯವಸ್ಥೆಯ ಅಗರವಾಗಿದೆ. ಈ ಬಗ್ಗೆ ಗಮನ ಸೆಳೆದ ಮಾಧ್ಯಮ ಪ್ರತಿನಿಧಿಗಳು, ನಗರಸಭೆ ಪಾರ್ಕ್‌ನಲ್ಲಿರುವ ಖಾಸಗಿ ಸಂಸ್ಥೆಗಳ ಕಟ್ಟಡಗಳ ತೆರವು ಬಗ್ಗೆ ಯಾವ ಕ್ರಮ ಕೈಗೊಳ್ಳುತ್ತೀರಿ ಎಂದು ಕೇಳಿದಾಗ, ಕಡತಗಳನ್ನು ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಪ್ರತಿಕ್ರಿಯಿಸಿದರು.

ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷ ವಿಶ್ವನಾಥ ಭೂತೆ, ಪೌರಾಯುಕ್ತ ಎಂ.ಕೆ. ನಲವಡಿ, ಎಇಇ ಮಹಮದ್ ಗೌಸ್, ರಾಜಸ್ವ ನಿರೀಕ್ಷಕರು ಎಂ.ಎಸ್. ಅಜಗೋಳ್, ಗ್ರಾಮ ಲೆಕ್ಕಾಧಿಕಾರಿ ಹೇಮಂತ್, ಸ್ಥಳೀಯ ನಿವಾಸಿಗಳು ಮತ್ತಿತರರು ಉಪಸ್ಥಿತರಿದ್ದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT