ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಂದಿನ ಹಂತದಲ್ಲಿ ಕಚೇರಿ, ಶಾಲೆಗೆ ತಡೆ

Last Updated 7 ಅಕ್ಟೋಬರ್ 2012, 19:30 IST
ಅಕ್ಷರ ಗಾತ್ರ

ಮಂಡ್ಯ: ಸುಪ್ರೀಂಕೋರ್ಟ್ ಸೋಮವಾರ ನೀಡಲಿರುವ ತೀರ್ಪು ನೋಡಿಕೊಂಡು ಮುಂದಿನ ಹೋರಾಟದ ರೂಪರೇಷೆ ನಿರ್ಧರಿಸಲಾಗುವುದು. ಶಾಲಾ-ಕಾಲೇಜಿಗೆ ವಿದ್ಯಾರ್ಥಿಗಳು ಹಾಗೂ ಸರ್ಕಾರಿ ಕಚೇರಿಗಳಿಗೆ ಸಿಬ್ಬಂದಿ ಹೋಗುವುದನ್ನು ತಡೆಯುವಂತಹ ಹೋರಾಟ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಅಧ್ಯಕ್ಷ ಜಿ.ಮಾದೇಗೌಡ ಕರೆ ನೀಡಿದರು.

 ವಿಶ್ವೇಶ್ವರಯ್ಯ ಪ್ರತಿಮೆ ಬಳಿ ನಡೆದಿರುವ ಸರದಿ ಉಪವಾಸ ಸತ್ಯಾಗ್ರಹಕ್ಕೆ ಬೆಂಬಲ ನೀಡಲು ಆಗಮಿಸಿದ್ದ ಅವರು, `ಮನೆಗೊಬ್ಬರಂತೆ ಜೈಲ್‌ಭರೋ ಚಳವಳಿಗೆ ಸಿದ್ಧರಾಗಿರಬೇಕು; ನೀರಿನ ಹಕ್ಕಿಗಾಗಿ ಹೋರಾಡಿ. ಜೈಲಿಗೆ ಹೋದರೆ ಗೌರವ ಹೆಚ್ಚಾಗುತ್ತದೆ~ ಎಂದರು.

`ಕೋರ್ಟ್ ತೀರ್ಪು ರಾಜ್ಯದ ಪರವಾಗಿ ಬರಲಿದೆ ಎಂಬ ನಂಬಿಕೆ ಇದೆ. ಒಂದು ವೇಳೆ ಬರದಿದ್ದರೆ, ಉಗ್ರ ಹೋರಾಟಕ್ಕೆ ಸಜ್ಜಾಗೋಣ~ ಎಂದರು.

ಬಳಿಕ ಜಿಲ್ಲೆಯ ಶಾಸಕರೊಂದಿಗೆ ಸಭೆ ನಡೆಸಿದ ಅವರು, ತೀರ್ಪಿನ ಕುರಿತು ಕೈಗೊಳ್ಳಬೇಕಾದ ಹೋರಾಟದ ಕುರಿತು ಚರ್ಚೆ ನಡೆಸಿದರು.

ರಸ್ತೆ ತಡೆ ಮುಂದುವರಿಕೆ
ಮಂಡ್ಯ, ಶ್ರೀರಂಗಪಟ್ಟಣ, ಗೆಜ್ಜಲಗೆರೆ, ಮದ್ದೂರು ಮುಂತಾದೆಡೆ ಬೆಂಗಳೂರು-ಮೈಸೂರು ಹೆದ್ದಾರಿ ತಡೆ ಭಾನುವಾರವೂ ಮುಂದುವರೆದಿದೆ. ವಿವಿಧ ಸಂಘಟನೆಗಳು, ಜಿಲ್ಲೆಯ ವಿವಿಧ ಗ್ರಾಮಸ್ಥರು ಪಾದಯಾತ್ರೆ ಮೂಲಕ ಆಗಮಿಸಿ ಹೋರಾಟಕ್ಕೆ ಬೆಂಬಲ ಸೂಚಿಸಿದರು. ಶ್ರೀರಂಗಪಟ್ಟಣ ತಾಲ್ಲೂಕಿನ ಮೊಗ್ಗರಹಳ್ಳಿ ಬಳಿ ಬಸ್ಸಿನ ಗಾಜಿಗೆ ಕಲ್ಲು ಹೊಡೆದ ಘಟನೆ ನಡೆದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT