ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಂದುವರಿದ ಅತಿಥಿ ಉಪನ್ಯಾಸಕರ ಧರಣಿ

Last Updated 19 ಫೆಬ್ರುವರಿ 2011, 7:55 IST
ಅಕ್ಷರ ಗಾತ್ರ

ಬಾಗಲಕೋಟೆ: ಸರ್ಕಾರಿ ಕಾಲೇಜುಗಳ ಅತಿಥಿ ಉಪನ್ಯಾಸಕರು ಮುಂದಿಟ್ಟಿರುವ ನೇಮಕಾತಿ ನವೀಕರಣ ಹಾಗೂ ವಯೋಮಿತಿ ಹೆಚ್ಚಳ ಸೇರಿದಂತೆ ಎಲ್ಲ ಬೇಡಿಕೆಗಳ ಬಗ್ಗೆ ಸಂಬಂಧಪಟ್ಟ ಇಲಾಖೆಯ ಸಚಿವರೊಂದಿಗೆ ಚರ್ಚೆ ನಡೆಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಭರವಸೆ ನೀಡಿದರು. ತರಗತಿಗಳನ್ನು ಬಹಿಷ್ಕರಿಸಿ ಅತಿಥಿ ಉಪನ್ಯಾಸಕರು ಜಿಲ್ಲಾಡಳಿತ ಭವನದ ಎದುರು ಆರಂಭಿಸಿರುವ ಅನಿರ್ದಿಷ್ಟಾವಧಿ ಧರಣಿ ಎರಡನೇ ದಿನಕ್ಕೆ ಕಾಲಿಟ್ಟಿದೆ.

ಶುಕ್ರವಾರ ಧರಣಿ ಸ್ಥಳಕ್ಕೆ ಭೇಟಿ ನೀಡಿದ ಸಚಿವ ಕಾರಜೋಳ, ಅತಿಥಿ ಉಪನ್ಯಾಸಕರ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಿದರು. ಸಂಬಂಧಪಟ್ಟ ಇಲಾಖೆಯ ಸಚಿವರೊಂದಿಗೆ ಚರ್ಚಿಸಿ ಸಮಸ್ಯೆ ಪರಿಹರಿಸುವ ಭರವಸೆ ನೀಡಿದ ಸಚಿವರು, ಧರಣಿ ಹಿಂದಕ್ಕೆ ಪಡೆಯುವಂತೆ ಮನವಿ ಮಾಡಿಕೊಂಡರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ.ಸೌದಾಗರ ಮತ್ತಿತರ ಮುಖಂಡರು ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಬೆಂಬಲ ಸೂಚಿಸಿದರು.

“ಬೇಡಿಕೆ ಈಡೇರಿಸುವ ಬಗ್ಗೆ ಸಚಿವರು ಭರವಸೆ ನೀಡಿದ್ದಾರೆ. ಆದರೆ ಸಂಬಂಧಪಟ್ಟ ಸಚಿವರಿಂದ ಸ್ಪಷ್ಟ ಭರವಸೆ ದೊರಕುವರೆಗೆ ಧರಣಿಯನ್ನು ಮುಂದುವರಿಸಲಾಗುವುದು” ಎಂದು ಜಿಲ್ಲಾ ಸರ್ಕಾರಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಡಾ.ವೆಂಕನಗೌಡ ಸಣ್ಣಸಕ್ಕರಪ್ಪಗೌಡರ ‘ಪ್ರಜಾವಾಣಿ’ಗೆ ತಿಳಿಸಿದರು. ಮುಖ್ಯಮಂತ್ರಿ ಯಡಿಯೂರಪ್ಪ ಶನಿವಾರ ಬಾದಾಮಿ ತಾಲ್ಲೂಕಿನ ನೀರಲಗಿ ಗ್ರಾಮಕ್ಕೆ ಭೇಟಿ ಆಗಮಿಸಲಿದ್ದು, ಅವರನ್ನು ಭೇಟಿ ಮಾಡಿ ಸಮಸ್ಯೆಗಳನ್ನು ವಿವರಿಸುವುದಾಗಿ ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT