ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಂದುವರಿದ ಸಿಐಟಿಯು ಮುಷ್ಕರ

Last Updated 13 ಫೆಬ್ರುವರಿ 2012, 8:15 IST
ಅಕ್ಷರ ಗಾತ್ರ

ಹಾಸನ: ಸೂಕ್ತ ವೇತನ ಸೇರಿದಂತೆ ನಾನಾ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸಿಐಟಿಯು ನೇತೃತ್ವದಲ್ಲಿ ಕಾರ್ಮಿಕರು ನಡೆಸುತ್ತಿರುವ ಪ್ರತಿಭಟನೆ 2ನೇ ದಿನವೂ ಮುಂದುವರಿದಿದೆ.

ನಗರದ ಹೊರವಲಯದ ಕೈಗಾರಿಕ ಪ್ರದೇಶದ ಹರಿಯಾಣ ಪವರ ಸ್ಟೀಲ್ ಕಂಪೆನಿ ಕಾರ್ಮಿಕರನ್ನು ದಿನದ 12 ಗಂಟೆ ದುಡಿಸಿಕೊಂಡು ಕಡಿಮೆ ವೇತನ ನೀಡುತ್ತಿದೆ. 5 ವರ್ಷದಿಂದ ಬೇರೆ ರಾಜ್ಯದವರು ಸೇರಿದಂತೆ ಸಮಾರು 150ಕ್ಕೂ ಹೆಚ್ಚು ಕಾರ್ಮಿಕರು ದುಡಿಯುತ್ತಿದ್ದಾರೆ. ಕಾರ್ಮಿಕರಿಗೆ ಸಿಗಬೇಕಾದ ಯಾವುದೇ ಸೌಲಭ್ಯ ನೀಡುತ್ತಿಲ್ಲ ಎಂದು ಪ್ರತಿಭಟನಕಾರರು ದೂರಿದರು.

ಇದನ್ನು ವಿರೋಧಿಸಿದ ಹಲವು ಕಾರ್ಮಿಕರನ್ನು ಕೆಲಸದಿಂದ ತೆಗೆದು ಹಾಕಲಾಗಿದೆ.  ಈ ಸಂಬಂಧ ಲೇಬರ್ ಕಮೀಷನ್‌ಗೂ ದೂರು ನೀಡಿದರೂ, ಯಾವುದೇ ಪ್ರಯೋಜನವಾಗಿಲ್ಲ. ಮುಂದೆ ನಮ್ಮ ಬೇಡಿಕೆ ಈಡೇರದಿದ್ದರೆ ಉಗ್ರ ಪ್ರತಿಭಟನೆ ನಡೆಸಲಾ ಗುವುದು ಎಂದು ಪ್ರತಿಭಟನಾಕಾರರು ತಿಳಿಸಿದರು.

ಪ್ರತಿಭಟನೆಯಲ್ಲಿ ಸಿಐಟಿಯು ಮುಖಂಡರಾದ ಧರ್ಮೇಶ್, ವಾಸುದೇವ್, ಅರವಿಂದ್ ಇತರರು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT