ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಂಬೈ ದಾಳಿ: ನ್ಯಾಯಕ್ಕೆ ಒತ್ತಾಯ

Last Updated 9 ಜೂನ್ 2011, 19:30 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): `ಮುಂಬೈ ದಾಳಿಗೆ ಕಾರಣರಾದ ದುಷ್ಕರ್ಮಿಗಳ ವಿರುದ್ಧ ಪಾಕಿಸ್ತಾನ ಸೂಕ್ತ ಕ್ರಮ ಜರುಗಿಸಬೇಕು ಎಂಬ ಭಾರತದ ಬೇಡಿಕೆಗೆ ಪಾಕಿಸ್ತಾನ ಒದಗಿಸುವ ನ್ಯಾಯ ಅವಾಸ್ತವಿಕ ಆಗಿರಬಾರದು~ ಎಂದು ವಿದೇಶಾಂಗ ಕಾರ್ಯದರ್ಶಿ ನಿರುಪಮಾ ರಾವ್ ಹೇಳಿದ್ದಾರೆ.

`ನಾವು ಚಂದ್ರನನ್ನು ಕೇಳುತ್ತಿಲ್ಲ. ಯಾವುದೇ ರೀತಿಯ ಅವಾಸ್ತವಿಕ ವಸ್ತುಗಳನ್ನು ಕೇಳುತ್ತಿಲ್ಲ. ಬದಲಾಗಿ ನ್ಯಾಯವನ್ನು ಕೇಳುತ್ತಿದ್ದೇವೆ~ ಎಂದು ಇಲ್ಲಿಗೆ ಭೇಟಿ ನೀಡಿರುವ ಪಾಕಿಸ್ತಾನದ ಪತ್ರಕರ್ತರೊಂದಿಗೆ ನಡೆದ ಸಂವಾದದಲ್ಲಿ ಅವರು ಅಭಿಪ್ರಾಯಪಟ್ಟರು.

`ಉಭಯ ದೇಶಗಳ ನಡುವಿನ ವಿದೇಶಾಂಗ ಸಚಿವರ ಮಾತುಕತೆ ಈ ತಿಂಗಳು ನಡೆಯಲಿದೆ. ಭದ್ರತೆ, ನೀರು, ವ್ಯಾಪಾರ ಹಾಗೂ ವಾಣಿಜ್ಯಕ್ಕೆ ಸಂಬಂಧಿಸಿದಂತೆ ಹಲವಾರು ಸುತ್ತುಗಳ ಚರ್ಚೆಯ ನಂತರ ಈ ಮಾತುಕತೆ ಏರ್ಪಡಿಸಲಾಗಿದೆ~ ಎಂದರು.

ಸಮಸ್ಯೆಗಳನ್ನು ಶಾಂತಿಯುತವಾಗಿ ಬಗೆಹರಿಸಿಕೊಳ್ಳುವ ಸಲುವಾಗಿ ಪಾಕಿಸ್ತಾನದೊಂದಿಗೆ ಮಾತುಕತೆ ಪುನರಾರಂಭಿಸುವ ಧೈರ್ಯ ತೋರಿದ್ದೇವೆ. ಈ ನಿಟ್ಟಿನಲ್ಲಿ ತೆಗೆದುಕೊಂಡಿರುವ ಪ್ರತಿಯೊಂದು ಕ್ರಮವೂ ಅರ್ಥಪೂರ್ಣವಾಗಿದೆ ಎಂದ ರಾವ್, ಪಾಕಿಸ್ತಾನದಲ್ಲಿನ ಉಗ್ರರ ಚಟುವಟಿಕೆಗಳ ಬಗ್ಗೆ ಕಳವಳ ವ್ಯಕ್ತಪಡಿಸಿದರು.

ಭಯೋತ್ಪಾದಕರಿಂದ ಏನೆಲ್ಲ ಕೃತ್ಯಗಳು ನಡೆದಿವೆ ಎಂಬುದು ಇಸ್ಲಾಮಾಬಾದ್‌ಗೆ ಚೆನ್ನಾಗಿ ತಿಳಿದಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT