ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಂಬೈ ಪಾಲಿಕೆ: ಶಿವಸೇನೆ-ಬಿಜೆಪಿ ಮತ್ತೆ ಅಧಿಕಾರಕ್ಕೆ

Last Updated 17 ಫೆಬ್ರುವರಿ 2012, 19:30 IST
ಅಕ್ಷರ ಗಾತ್ರ

ಮುಂಬೈ (ಪಿಟಿಐ): ಬೃಹನ್ ಮುಂಬೈ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಶಿವಸೇನೆ ಮತ್ತು ಬಿಜೆಪಿ ಮೈತ್ರಿಕೂಟ ಅಧಿಕಾರ ಹಿಡಿಯುವುದು ಬಹುತೇಕ ಖಚಿತವಾಗಿದೆ.

 227 ಸ್ಥಾನಗಳಲ್ಲಿ ಶಿವಸೇನೆ 77, ಬಿಜೆಪಿ 30 ಸ್ಥಾನ ಗಳಿಸಿ ಅತಿದೊಡ್ಡ ಮೈತ್ರಿಕೂಟವಾಗಿದೆ. ಉಳಿದಂತೆ ಮಹಾರಾಷ್ಟ್ರ ನವ ನಿರ್ಮಾಣ ಸೇನೆ 27 ಸ್ಥಾನಗಳನ್ನು ಗೆದ್ದಿದೆ. ಕಾಂಗ್ರೆಸ್ 51, ಎನ್‌ಸಿಪಿ 14 ಹಾಗೂ ಇತರರು 28 ಸ್ಥಾನಗಳನ್ನು ಪಡೆದುಕೊಂಡಿದ್ದಾರೆ.

ನಾಸಿಕ್‌ನಲ್ಲಿ ರಾಜ್ ಠಾಕ್ರೆ ಅವರ ಮಹಾರಾಷ್ಟ್ರ ನವ ನಿರ್ಮಾಣ ಸೇನೆ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಆದರೆ ಪುಣೆಯಲ್ಲಿ ಕಾಂಗ್ರೆಸ್-ಎನ್‌ಸಿಪಿ ಬಹುಮತ ಪಡೆದಿವೆ.

ಥಾಣೆಯಲ್ಲಿ ಬಿಜೆಪಿ- ಶಿವಸೇನೆ ಅಧಿಕಾರ ಉಳಿಸಿಕೊಳ್ಳುವ ಸಾಧ್ಯತೆ ಇದೆ. ನಾಗಪುರದಲ್ಲಿಯೂ ಬಿಜೆಪಿ- ಶಿವಸೇನೆ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಬಹುಮತಕ್ಕೆ ಐದು ಸ್ಥಾನಗಳ ಕೊರತೆ ಇದೆ.

ಸೊಲ್ಲಾಪುರ, ಅಮರಾವತಿ ಮತ್ತು ಪಿಮ್‌ಪ್ರಿ ಚಿಂಚ್ವಾಡಗಳಲ್ಲಿ ಕಾಂಗ್ರೆಸ್-ಎನ್‌ಸಿಪಿ ಸ್ಪಷ್ಟ ಬಹುಮತ ಪಡೆದಿವೆ.
                         

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT