ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಖ್ಯ ಮಾಹಿತಿ ಆಯುಕ್ತರಾಗಿ ದೀಪಕ್ ಸಂಧು

Last Updated 5 ಸೆಪ್ಟೆಂಬರ್ 2013, 19:59 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ದೀಪಕ್ ಸಂಧು ಅವರು ಮುಖ್ಯ ಮಾಹಿತಿ ಆಯುಕ್ತರಾಗಿ ನೇಮಕಗೊಂಡಿದ್ದಾರೆ. ಮಹಿಳೆಯೊಬ್ಬರು ಈ ಸ್ಥಾನಕ್ಕೆ ನೇಮಕಗೊಂಡಿರುವುದು ಇದೇ ಮೊದಲು.

ಸಂಧು ಅವರು ನಾಲ್ಕು ವರ್ಷಗಳ ವರೆಗೆ ಮಾಹಿತಿ ಆಯುಕ್ತರಾಗಿ ಸೇವೆ ಸಲ್ಲಿಸಿದ್ದರು.

1971ರ ತಂಡದ ಐಐಎಸ್ (ಭಾರತೀಯ ವಾರ್ತಾ ಸೇವೆ) ಅಧಿಕಾರಿ ಸಂಧು ಅವರು ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ಅಧಿಕಾರ ಸ್ವೀಕರಿಸಿದರು. ರಾಷ್ಟ್ರಪತಿ ಪ್ರಣವ್ ಮುಖರ್ಜಿ ಹಾಗೂ ಉಪರಾಷ್ಟ್ರಪತಿ ಹಮೀದ್ ಅನ್ಸಾರಿ ಇದ್ದರು.

ಮಾಧ್ಯಮ ಹಾಗೂ ಸಂವಹನ ವಿಭಾಗ, ದೂರದರ್ಶನ ಹಾಗೂ ಆಕಾಶವಾಣಿಯಲ್ಲಿ ಇವರು ಪ್ರಧಾನ ನಿರ್ದೇಶಕಿಯಾಗಿದ್ದರು. 2009ರಲ್ಲಿ ಮಾಹಿತಿ ಆಯುಕ್ತರಾಗಿ ನೇಮಕಗೊಂಡಿದ್ದರು.

64 ವರ್ಷದ ಸಂಧು ಅವರು ಕೇವಲ ಮೂರು ತಿಂಗಳು ಸೇವೆಯಲ್ಲಿರುತ್ತಾರೆ. ಈ ಅವಧಿಯಲ್ಲಿ 30,000 ಬಾಕಿ ಪ್ರಕರಣಗಳನ್ನು ಇತ್ಯರ್ಥಪಡಿಸಬೇಕಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT