ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಖ್ಯಮಂತ್ರಿ ಭೇಟಿ: ಸಿದ್ಧತೆಗೆ ಸೂಚನೆ

Last Updated 26 ಸೆಪ್ಟೆಂಬರ್ 2013, 10:29 IST
ಅಕ್ಷರ ಗಾತ್ರ

ಚಾಮರಾಜನಗರ: ‘ರಾಜ್ಯ ಸರ್ಕಾರದ ಮನಸ್ವಿನಿ ಯೋಜನೆ, ಜಿಲ್ಲಾ ಪ್ರಗತಿ ಪರಿಶೀಲನೆ, ವಿವಿಧ ಅಭಿವೃದ್ಧಿ ಕಾಮಗಾರಿ ಉದ್ಘಾಟನೆ, ಶಂಕುಸ್ಥಾಪನೆ ನೆರವೇರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಜಿಲ್ಲೆಗೆ ಆಗಮಿಸು ತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ಅಗತ್ಯ ಸಿದ್ಧತೆ ಕೈಗೊಳ್ಳಬೇಕು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಎಸ್. ಮಹದೇವ ಪ್ರಸಾದ್ ಸೂಚಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಮುಖ್ಯಮಂತ್ರಿ ಭೇಟಿ ಹಿನ್ನೆಲೆಯಲ್ಲಿ ನಡೆದ ಪೂರ್ವ ಸಿದ್ಧತಾ ಸಭೆಯಲ್ಲಿ ಅವರು ಮಾತನಾಡಿದರು.

ಅ. 7ರಂದು 40ವರ್ಷ ಮೇಲ್ಪಟ್ಟ ಅವಿವಾಹಿತ ಹಾಗೂ ವಿಚ್ಚೇದಿತ ಮಹಿಳೆಯರಿಗೆ ಮಾಸಾಶನ ನೀಡುವ ರಾಜ್ಯಮಟ್ಟದ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಅವರು ಉದ್ಘಾಟಿಸಲಿದ್ದಾರೆ. ಇದೇ ವೇಳೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೂ ಚಾಲನೆ ನೀಡಲಿದ್ದಾರೆ. ವಿವಿಧ ಇಲಾಖೆಗಳು ತಮ್ಮ ವ್ಯಾಪ್ತಿಯ ಕಾಮಗಾರಿಯನ್ನು ಗುಣಮಟ್ಟದಿಂದ ಪೂರ್ಣಗೊಳಿಸಿ ಸಿದ್ಧಪಡಿಸಬೇಕು. ಶಂಕುಸ್ಥಾಪನೆ ಕಾಮಗಾರಿ ಇದ್ದರೆ ಕೂಡಲೇ ಅಗತ್ಯ ಮಂಜೂರಾತಿಗೆ ಪ್ರಸ್ತಾವನೆ ಸಲ್ಲಿಸಬೇಕು ಎಂದು ಹೇಳಿದರು.

ಬೈಂದೂರಿನಲ್ಲಿ ಠಾಣೆ: ಬೈಂದೂರು, ಒಡೆಯರಪಾಳ್ಯದಲ್ಲೂ ಪೊಲೀಸ್ ಠಾಣೆ ತೆರೆಯಲು ನಿರ್ಧರಿಸಲಾಗಿದೆ. ಈ ಕುರಿತು ಶೀಘ್ರವೇ ಪ್ರಸ್ತಾವನೆ ಸಲ್ಲಿಸಬೇಕು. ಜಿಲ್ಲಾ ಕೇಂದ್ರದಲ್ಲಿ ಸಂಚಾರ ಠಾಣೆ ಹಾಗೂ ಮಹಿಳಾ ಪೊಲೀಸ್ ಠಾಣೆ ಆರಂಭಕ್ಕೆ ಅಗತ್ಯವಿರುವ ಆಡಳಿತಾತ್ಮಕ ಮಂಜೂರಾತಿಯನ್ನು ಶೀಘ್ರವೇ ಪಡೆಯಲಾಗುವುದು ಎಂದರು.

ಸಮಾಜ ಕಲ್ಯಾಣ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಿಂದ ನಿರ್ಮಾಣ ಮಾಡಿರುವ ವಿದ್ಯಾರ್ಥಿನಿಲಯ ಕಟ್ಟಡಗಳ ಕಾಮಗಾರಿ ಪೂರ್ಣಗೊಂಡಿದೆ. ಪಾಲಿಟೆಕ್ನಿಕ್ ಮಹಿಳಾ ಹಾಸ್ಟೆಲ್, ಚಂದಕವಾಡಿಯ ಮೆಟ್ರಿಕ್ ಪೂರ್ವ ಹಾಸ್ಟೆಲ್ ನಿರ್ಮಾಣದ ಅಂತಿಮ ಕೆಲಸಗಳನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಿ ಉದ್ಘಾಟನೆಗೆ ಸಜ್ಜುಗೊಳಿಸಬೇಕು ಎಂದು ನಿರ್ದೇಶನ ನೀಡಿದರು.

ಸಭೆಯಲ್ಲಿ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ, ಎಸ್. ಜಯಣ್ಣ, ಆರ್. ನರೇಂದ್ರ, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಜಿ. ನಾಗಶ್ರೀ, ಉಪಾಧ್ಯಕ್ಷ ಪಿ. ಮಹದೇವಪ್ಪ, ಜಿಲ್ಲಾಧಿಕಾರಿ ಎ.ಎಂ. ಕುಂಜಪ್ಪ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ. ರಾಜೇಂದ್ರಪ್ರಸಾದ್, ಜಿಲ್ಲಾ ಪಂಚಾಯಿತಿಯ  ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಕೆ.ಎಚ್. ನರಸಿಂಹಮೂರ್ತಿ, ಹೆಚ್ಚುವರಿ ಜಿಲ್ಲಾಧಿಕಾರಿ ಡಿ. ಭಾರತಿ, ಉಪ ವಿಭಾಗಾಧಿಕಾರಿ ಎಚ್.ಎಸ್. ಸತೀಶ್‌ಬಾಬು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT