ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುದುಡಿಶಾಲೆ: ಅರಳುತ್ತಿರುವ ಮಕ್ಕಳು

Last Updated 12 ಜನವರಿ 2013, 6:51 IST
ಅಕ್ಷರ ಗಾತ್ರ

ಅರಸೀಕೆರೆ: ಖಾಸಗಿ ಶಾಲೆಗಳಿಗೆ ಕಡಿಮೆ ಇಲ್ಲ ಎಂಬಂತೆ ಸಂಪನ್ಮೂಲಗಳನ್ನೇ ಬಳಸಿಕೊಂಡು ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ನೀಡುತ್ತಿದೆ ತಾಲ್ಲೂಕಿನ ಗಂಡಸಿ ಹೋಬಳಿಯ ಮುದುಡಿ ಸರ್ಕಾರಿ ಹಿರಿಯ ಮಾಧ್ಯಮಿಕ ಶಾಲೆ.

ಅರಸೀಕೆರೆ-ಮೈಸೂರು ರಸ್ತೆ ಬದಿಯಿರುವ ಈ ಶಾಲೆಯಲ್ಲಿ ಕನ್ನಡ ಮತ್ತು ಆಂಗ್ಲ ಭಾಷೆಗಳಿಗೆ ಸಮಾನ ಮಹತ್ವ ನೀಡಿ ಮಕ್ಕಳಿಗೆ ಕಲಿಸಲಾಗುತ್ತಿದೆ.

ಈ ಶಾಲೆಯಲ್ಲಿ 133 ಮಕ್ಕಳು ವ್ಯಾಸಂಗ ಮಾಡುತ್ತಿದ್ದು, ಆರು ಶಿಕ್ಷಕರು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಶಿಕ್ಷಕರು ಕಲಿಕೆಗೆ ಬೇಕಾದ ಆಗತ್ಯ ಸೌಲಭ್ಯ ಒದಗಿಸಿದ್ದು ಹೋಬಳಿಯಲ್ಲಿ ಅತ್ಯುತ್ತಮ ಶಾಲೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ಪ್ರತಿ ಶುಕ್ರವಾರ ಪ್ರತಿಭಾ ಕಾರಂಜಿ ಕಾರ್ಯಕ್ರಮ ಆಯೋಜಿಸಿ ಚರ್ಚಾ ಸ್ಪರ್ಧೆ, ಪ್ರಬಂಧ ಮಂಡನೆ, ಚಿತ್ರಕಲೆ, ಮಾಡೆಲಿಂಗ್ ಮುಂತಾದ ವಿಷಯಗಳ ಬಗ್ಗೆ ಮಕ್ಕಳಿಗೆ ತಿಳಿವಳಿಕೆ ನೀಡಲಾಗುತ್ತದೆ. ಶಾಲೆಯಲ್ಲಿ ಉತ್ತಮ ಗ್ರಂಥಾಲಯವಿದೆ, ಮಕ್ಕಳು ಬಿಡುವಿನ ವೇಳೆಯಲ್ಲಿ ಸಮಾಜ ಸುಧಾರಕರ, ವಿಜ್ಞಾನಿಗಳ ಬಗ್ಗೆ ಪುಸ್ತಕಗಳನ್ನು ಓದುವ ಮೂಲಕ ಜ್ಞಾನಾರ್ಜನೆ ಮಾಡಿಕೊಳ್ಳುತ್ತಾರೆ.

ಏಕೆಂದರೆ ಶಾಲೆಯ ಗೋಡೆಗಳ ಮೇಲೆ ಪರಿಸರ ಸಂಬಂಧಿ ಚಿತ್ರಗಳು, ಸ್ವಾತಂತ್ರ್ಯ ಹೋರಾಟಗಾರರ, ಸಮಾಜ ಸುಧಾರಕರ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರ ಭಾವಚಿತ್ರಗಳು, ಅಕ್ಷರ ಜ್ಞಾನ ಕುರಿತಾದ ಚಿತ್ರಪಟಗಳು ಕಂಡು ಬರುತ್ತವೆ.

ಶಾಲೆಯಲ್ಲಿ ಕಂಪ್ಯೂಟರ್ ಶಿಕ್ಷಣ ನೀಡುತ್ತಿರುವುದರಿಂದ ಗ್ರಾಮದ ಸುತ್ತಮುತ್ತಲ ಹಳ್ಳಿಗಳ ಪೋಷಕರು ತಮ್ಮ ಮಕ್ಕಳನ್ನು ಕಾನ್ವೆಂಟ್ ಬದಲು ಸರ್ಕಾರಿ ಶಾಲೆಗೆ ಸೇರಿಸುತ್ತಿದ್ದಾರೆ. ಉತ್ತಮ ಆಟದ ಮೈದಾನ ಹೊಂದಿದ್ದು, ಪ್ರತಿ ಶನಿವಾರ ಬೆಳಿಗ್ಗೆ ವ್ಯಾಯಾಮ, ಯೋಗ, ಏರೋಬಿಕ್ಸ್ ಅಭ್ಯಾಸ ಮಾಡಿಸಲಾಗುತ್ತದೆ.

ಶಾಲೆಯ ಗೋಡೆಗಳ ಮೇಲೆ ಕನ್ನಡ ವರ್ಣಮಾಲೆ, ಸಂಖ್ಯೆಗಳ ಪರಿಚಯ, ಅಕ್ಷರಗಳ ತೋರಣ, ಚಿತ್ರಪಟಗಳ ಅನಾವರಣ, ಸಸ್ಯಗಳನ್ನು ಪರಿಚಯಿಸುವ ವಿವಿಧ ಜಾತಿಯ ಹೂಗಳನ್ನು ಗುರುತಿಸುವ ಹಾಗೂ ಪ್ರಾಣಿಗಳನ್ನು ಹೇಗೆ ಸಂರಕ್ಷಿಸಬೇಕು ಎನ್ನುವ ಮಾಹಿತಿ ನೀಡುವ ಚಿತ್ರಗಳಿವೆ. ಶಿಕ್ಷಕರು ಈ ಬಗ್ಗೆ ತರಬೇತಿ ನೀಡುತ್ತಾರೆ ಎಂದು ಮಕ್ಕಳು ಹೇಳುತ್ತಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT