ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುನ್ನೆಚ್ಚರಿಕೆ: ರೌಡಿಗಳ ಸೆರೆ

Last Updated 3 ಏಪ್ರಿಲ್ 2013, 19:21 IST
ಅಕ್ಷರ ಗಾತ್ರ

ಬೆಂಗಳೂರು: ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ನಗರ ಕೇಂದ್ರ ವಿಭಾಗದ ಪೊಲೀಸರು ವಿವಿಧ ಠಾಣೆಗಳ ವ್ಯಾಪ್ತಿಯಲ್ಲಿನ ರೌಡಿಗಳ ಮನೆಗಳ ಮೇಲೆ ಬುಧವಾರ ನಸುಕಿನಲ್ಲಿ ದಿಢೀರ್ ದಾಳಿ ನಡೆಸಿ ಮುನ್ನೆಚ್ಚರಿಕಾ ಕ್ರಮವಾಗಿ 59 ರೌಡಿಗಳನ್ನು ಬಂಧಿಸಿದ್ದಾರೆ.

ಕೇಂದ್ರ ವಿಭಾಗದ 12 ಠಾಣೆಗಳ ರೌಡಿ ಪಟ್ಟಿಯಲ್ಲಿರುವ ರೌಡಿಗಳ ಮನೆ ಮೇಲೆ ಬೆಳಗಿನ ಜಾವ ಐದು ಗಂಟೆಗೆ ಹಿರಿಯ ಅಧಿಕಾರಿಗಳು ಸಿಬ್ಬಂದಿ ಜತೆ ದಾಳಿ ನಡೆಸಿದರು. ಸುಮಾರು ಆರು ತಾಸುಗಳ ಕಾಲ ನಡೆದ ಈ ಕಾರ್ಯಾಚರಣೆಯಲ್ಲಿ ರೌಡಿಗಳ ಕಾರ್ಯಚಟುವಟಿಕೆ ಹಾಗೂ ಅವರ ಕುಟುಂಬ ಸದಸ್ಯರ ಬಗ್ಗೆ ಸಿಬ್ಬಂದಿ ಮಾಹಿತಿ ಕಲೆಹಾಕಿದರು.

`ದಾಳಿ ವೇಳೆ 89 ಮಂದಿಯನ್ನು ವಶಕ್ಕೆ ಪಡೆದು ಅವರ ಕಾರ್ಯಚಟುವಟಿಕೆ ಬಗ್ಗೆ ಮಾಹಿತಿ ಸಂಗ್ರಹಿಸಲಾಯಿತು. ಇವರಲ್ಲಿ 59 ಮಂದಿಯ ಕಾರ್ಯಚಟುವಟಿಕೆ ಬಗ್ಗೆ ಸಂಶಯ ವ್ಯಕ್ತವಾಗಿದ್ದರಿಂದ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಬಳಿಕ ನ್ಯಾಯಾಧೀಶರು ಕೆಲ ರೌಡಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ಹೊರಡಿಸಿದರು' ಎಂದು ಹಿರಿಯ ಅಧಿಕಾರಿಗಳು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT