ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಷರಫ್ ಬಂಧನ

Last Updated 19 ಏಪ್ರಿಲ್ 2013, 9:45 IST
ಅಕ್ಷರ ಗಾತ್ರ

ಇಸ್ಲಾಮಾಬಾದ್ (ಪಿಟಿಐ/ಐಎಎನ್‌ಎಸ್) : ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ ಅವರನ್ನು ಶುಕ್ರವಾರ ಪೊಲೀಸರು ಬಂಧಿಸಿದ್ದಾರೆ.

ಇಸ್ಲಾಮಾಬಾದ್ ಹೊರವಲಯದ ಚಕ್ ಶಾಹಜದ್‌ನಲ್ಲಿರುವ ಅವರ ತೋಟದ ಮನೆಯಿಂದ ಶುಕ್ರವಾರ ಬೆಳಿಗ್ಗೆ ಮುಷರಫ್ ಅವರನ್ನು ಪೊಲೀಸರು ಬಂಧಿಸಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದರು.

ಇದೇ ವೇಳೆ ಪೊಲೀಸ್ ಅಧಿಕಾರಿಗಳು ಮುಷರಫ್ ಅವರಿಗೆ ಜೀವಬೆದರಿಕೆ ಇರುವುದರಿಂದ ಭದ್ರತಾ ಕಾರಣಗಳಿಗಾಗಿ ಅವರ ಮನೆಯನ್ನೆ ಉಪಕಾರಗೃಹವನ್ನಾಗಿ ಪರಿಗಣಿಸಬೇಕೆಂದು ನ್ಯಾಯಾಧೀಶರಲ್ಲಿ ಮನವಿ ಮಾಡಿದರು. ನ್ಯಾಯಾಧೀಶರು ಅವರನ್ನು ಪೊಲೀಸ್ ವಶಕ್ಕೆ ಒಪ್ಪಿಸಿ ಮುಂದಿನ 2 ದಿನಗಳಲ್ಲಿ ಭಯೋತ್ಪಾದನಾ ವಿರೋಧಿ ನ್ಯಾಯಾಲಯದ ಎದುರು ಹಾಜರುಪಡಿಸುವಂತೆ ಸೂಚಿಸಿದರೆಂದು ಮೂಲಗಳು ತಿಳಿಸಿವೆ.

ಗುರುವಾರವಷ್ಟೆ ಪ್ರಕರಣವೊಂದರ ಸಂಬಂಧ ಮಧ್ಯಂತರ ಜಾಮೀನು ವಿಸ್ತರಣೆ ಕೋರಿ ಹೈಕೋರ್ಟ್‌ಗೆ ಹಾಜರಾಗಿದ್ದ ಮುಷರಫ್ ಅವರ ಅರ್ಜಿಯನ್ನು ತಿರಸ್ಕರಿಸಿದ ನ್ಯಾಯಾಧೀಶರು ತಕ್ಷಣ ಬಂಧಿಸುವಂತೆ ಆದೇಶಿಸಿದ್ದರು. ಆದರೆ ಮುಷರಫ್ ತಮ್ಮ ಅಂಗರಕ್ಷಕ ಪಡೆಯೊಂದಿಗೆ ಅಲ್ಲಿಂದ ಪಲಾಯನ ಮಾಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT