ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಷರಫ್‌ ವಿರುದ್ಧ ಜ.1ಕ್ಕೆ ಆರೋಪ ನಿಗದಿ

Last Updated 24 ಡಿಸೆಂಬರ್ 2013, 19:30 IST
ಅಕ್ಷರ ಗಾತ್ರ

ಇಸ್ಲಾಮಾಬಾದ್‌ (ಐಎಎನ್‌ಎಸ್‌): ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್‌ ಮುಷರಫ್‌ ಅವರ ಮೇಲಿನ ರಾಷ್ಟ್ರದ್ರೋಹ ಪ್ರಕರಣದ ವಿಚಾರಣೆಗಾಗಿ ಸ್ಥಾಪಿಸಲಾಗಿರುವ  ಇಲ್ಲಿನ ವಿಶೇಷ ನ್ಯಾಯಾಲಯ ಜನವರಿ 1ರಂದು ಆರೋಪ ನಿಗದಿ ಮಾಡಲಿದೆ. ಮುಷರಫ್‌ ಅವರು 2007ರಲ್ಲಿ ತುರ್ತು ಪರಿಸ್ಥಿತಿ ಹೇರಿ ರಾಷ್ಟ್ರದ್ರೋಹ ಎಸಗಿದ್ದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆಗೆ ಮಂಗಳವಾರ ನ್ಯಾಯಾಲಯಕ್ಕೆ ಖುದ್ದು ಹಾಜರಾಗಲು ಸಮನ್ಸ್‌ ಜಾರಿ ಮಾಡಲಾಗಿತ್ತು.

ಆದರೆ ಮುಷರಫ್‌ ಅವರನ್ನು ನ್ಯಾಯಾಲಯಕ್ಕೆ ಕರೆ ತರುವ ಮಾರ್ಗದಲ್ಲಿ ಬಾಂಬ್‌ ಹಾಗೂ ಬಂಧೂಕುಗಳು ಸಿಕ್ಕ ಹಿನ್ನೆಲೆಯಲ್ಲಿ ಪೊಲೀಸರು ಅವರನ್ನು ಹಾಜರುಪಡಿಸಲು ಆಗಲಿಲ್ಲ  ಎಂದು ಸುದ್ದಿಸಂಸ್ಥೆ ವರದಿ ಮಾಡಿದೆ. ತಮ್ಮ ಕಕ್ಷಿದಾರರಿಗೆ ಜೀವ ಬೆದರಿಕೆ ಇರುವುದರಿಂದ ಕೋರ್ಟ್‌ಗೆ ಹಾಜರಾಗಲು ಸಾಧ್ಯವಾಗಲಿಲ್ಲ ಎಂಬ ಮುಷರಫ್‌ ಪರ ವಕೀಲರ ಹೇಳಿಕೆಯನ್ನು ಮಾನ್ಯ ಮಾಡಿದ ಕೋರ್ಟ್‌, ವಿಚಾರಣೆಯನ್ನು ಜ.1ಕ್ಕೆ ಮುಂದೂಡಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT