ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೂಡಾ ಹಗರಣ ಸಿಐಡಿ ತನಿಖೆಗೆ: ಸಚಿವ ವಿನಯ್‌ಕುಮಾರ್ ಸೊರಕೆ

ವಿಧಾನ ಮಂಡಲ ಕಲಾಪ
Last Updated 16 ಜುಲೈ 2013, 19:59 IST
ಅಕ್ಷರ ಗಾತ್ರ

ಬೆಂಗಳೂರು: ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರದ (ಮೂಡಾ) ರೂ 5 ಕೋಟಿ ನಗದು, ಕಾಂಗ್ರೆಸ್ ಕಾರ್ಯಕರ್ತರೊಬ್ಬರ ಖಾತೆಗೆ ವರ್ಗಾವಣೆ ಆಗಿರುವ ಪ್ರಕರಣ ಕುರಿತು ಸಿಐಡಿ ತನಿಖೆ ನಡೆಸಲಾಗುವುದು ಎಂದು ನಗರಾಭಿವೃದ್ಧಿ ಸಚಿವ ವಿನಯ್ ಕುಮಾರ್ ಸೊರಕೆ ಮಂಗಳವಾರ ವಿಧಾನಸಭೆಗೆ ತಿಳಿಸಿದರು.

ಜೆಡಿಎಸ್‌ನ ಎನ್.ಚೆಲುವರಾಯಸ್ವಾಮಿ ಶೂನ್ಯವೇಳೆಯಲ್ಲಿ ವಿಷಯ ಪ್ರಸ್ತಾಪಿಸಿ, `ಮೂಡಾ ಹಣ  ಹೇಗೆ ಕಾಂಗ್ರೆಸ್ ಕಾರ್ಯಕರ್ತನ ಬ್ಯಾಂಕ್ ಖಾತೆಗೆ ವರ್ಗಾವಣೆ ಆಯಿತು? ಇದರಲ್ಲಿ ಯಾರ‌್ಯಾರು ಶಾಮೀಲಾಗಿದ್ದಾರೆ ಎಂಬುದರ ಸಮಗ್ರ ತನಿಖೆ ನಡೆಸಬೇಕು' ಎಂದು ಒತ್ತಾಯಿಸಿದರು.

ಅಲಹಾಬಾದ್ ಬ್ಯಾಂಕ್‌ನಲ್ಲಿದ್ದ ಐದು ಕೋಟಿ ಕೆ.ಆನಂದ ಎಂಬುವರ ಇಂಡಿಯನ್ ಬ್ಯಾಂಕ್ ಖಾತೆಗೆ ವರ್ಗಾವಣೆ ಆಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲವರನ್ನು ಬಂಧಿಸಲಾಗಿದೆ. ಆದರೆ, ಸತ್ಯ ಏನು ಏನ್ನುವುದು ಇನ್ನೂ ಗೊತ್ತಾಗಿಲ್ಲ ಎಂದು ಚೆಲುವರಾಯಸ್ವಾಮಿ ಹೇಳಿದರು.

ಇಡೀ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲಾಗುವುದು. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸೊರಕೆ ವಿವರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT