ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೂರು ಹೊಸ ಪಾಲಿಕೆ ಅಸ್ತಿತ್ವಕ್ಕೆ

Last Updated 26 ಸೆಪ್ಟೆಂಬರ್ 2013, 19:59 IST
ಅಕ್ಷರ ಗಾತ್ರ

ಬೆಂಗಳೂರು: ತುಮಕೂರು, ಶಿವಮೊಗ್ಗ ಹಾಗೂ ವಿಜಾಪುರ ನಗರಸಭೆಗಳನ್ನು ಮಹಾ­ನಗರ ಪಾಲಿಕೆಗಳನ್ನಾಗಿ ಮೇಲ್ದರ್ಜೆಗೇ­ರಿಸಲು ರಾಜ್ಯ ಸಚಿವ ಸಂಪುಟ ಸಭೆ ನಿರ್ಧರಿಸಿದೆ. ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ತೆಗೆದು ಕೊಳ್ಳ­ಲಾಗಿದ್ದು, ತಕ್ಷಣದಿಂದಲೇ ಇವು ಅಸ್ತಿತ್ವಕ್ಕೆ ಬರಲಿವೆ ಎಂದು ಕಾನೂನು ಸಚಿವ ಟಿ.ಬಿ.ಜಯಚಂದ್ರ ಸುದ್ದಿಗಾರರಿಗೆ ತಿಳಿಸಿದರು.

ಮುಖ್ಯಮಂತ್ರಿಗಳ ನಗರೋತ್ಥಾನ ಯೋಜನೆಯಡಿ ಪ್ರತಿ ಪಾಲಿಕೆಗೆ ₨100 ಕೋಟಿ ಅನುದಾನ ದೊರೆಯಲಿದೆ. ಈಗಿರುವ ನಗರಸಭೆಯ ಅಧ್ಯಕ್ಷ – ಉಪಾಧ್ಯಕ್ಷರು ಇನ್ನು ಮುಂದೆ ಮೇಯರ್‌ – ಉಪ ಮೇಯರ್‌ ಆಗಿ ಕಾರ್ಯನಿರ್ವಹಿಸಲಿದ್ದಾರೆ ಎಂದರು.

ಸದ್ಯಕ್ಕೆ ಈಗಿರುವ ಚುನಾಯಿತ ಪ್ರತಿನಿಧಿಗಳು ಮುಂದುವರಿಯ ಲಿದ್ದಾರೆ. ಪಾಲಿಕೆಯಾದ ಆದ  ಆರು ತಿಂಗಳ ಒಳಗೆ ಚುನಾವಣೆ ನಡೆಸಬೇಕು ಎಂಬ ಕಾಯ್ದೆ ಇದೆ. ಈ ಕಾನೂನು ತೊಡಕು ನಿವಾರಣೆಗೆ ಕ್ರಮಕೈಗೊಳ್ಳ ಲಾಗುವುದು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಹೊಸ ನೀತಿ: ರಾಜ್ಯದಲ್ಲಿ ಹೊಸದಾಗಿ ವೈದ್ಯಕೀಯ ಕಾಲೇಜುಗಳನ್ನು ಆರಂಭಿ ಸುವುದಕ್ಕೆ  ನಿರಾಕ್ಷೇಪಣಾ ಪತ್ರವನ್ನು ನೀಡುವ ಸಂಬಂಧ ಹೊಸ ನೀತಿ ರೂಪಿಸಲು ಸರ್ಕಾರ ತೀರ್ಮಾನಿಸಿದೆ.

ಮೂಕಾಂಬಿಕಾ, ಈಸ್ಟ್‌ಪಾಯಿಂಟ್‌ ಆಫ್‌ ಮೆಡಿಕಲ್‌ ಕಾಲೇಜು, ಲಲಿ ತಾಂಬಿಕಾ ವೈದ್ಯಕೀಯ ಕಾಲೇಜು ಸೇರಿ ದಂತೆ ನಾಲ್ಕು ಖಾಸಗಿ ಕಾಲೇಜುಗಳನ್ನು ಆರಂಭಿಸಲು ಅನುಮತಿ ಕೋರಿ ಪ್ರಸ್ತಾವನೆಗಳು ಬಂದಿದ್ದವು. ಆದರೆ, ಭಾರತೀಯ ವೈದ್ಯಕೀಯ ಮಂಡಳಿ ನಿಗದಿಪಡಿಸಿರುವ ಮಾನದಂಡಗಳನ್ನು ಪೂರೈಸಿಲ್ಲ. ಹೀಗಾಗಿ ಆ ಪ್ರಸ್ತಾವನೆ ಗಳನ್ನು ತಡೆಹಿಡಿಯಲಾಗಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT