ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೂಲ ಉದ್ದೇಶ ಜಾರಿ: ಸಂಸ್ಥೆಗಳಿಗೆ ಸಲಹೆ

Last Updated 7 ಜುಲೈ 2012, 5:35 IST
ಅಕ್ಷರ ಗಾತ್ರ

ಬೀದರ್: ಖಾಸಗಿ ಶಿಕ್ಷಣ ಸಂಸ್ಥೆಗಳು ಯಾವ ಉದಾತ್ತ ಚಿಂತನೆಯಿಂದ ಆರಂಭವಾಗಿವೆಯೋ ಅದನ್ನು ಜಾರಿಗೊಳಿಸುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸಬೇಕು ಎಂದು  ಉದ್ಯೋಗ ಮತ್ತು ತರಬೇತಿ ಇಲಾಖೆಯ ವಿಭಾಗೀಯ ಕಚೇರಿಯ ಜಂಟಿ ನಿರ್ದೇಶಕ ಬಿ.ಎಲ್.ಚಂದ್ರಶೇಖರ್ ಗುರುವಾರ ಅಭಿಪ್ರಾಯಪಟ್ಟರು.

ರಂಗಮಂದಿರದಲ್ಲಿ ನಡೆದ ಸಪ್ತಗರಿ ಸಮೂಹ ಶಿಕ್ಷಣ ಸಂಸ್ಥೆಗಳ ವಾರ್ಷಿಕೋತ್ಸವ ಸಮಾರಂಭ ಉದ್ಘಾಟಿಸಿದ ಅವರು, ಸರ್ಕಾರವೇ ಎಲ್ಲವನ್ನೂ ಮಾಡಲಾಗದು ಎಂದು ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಖಾಸಗೀಕರಣಕ್ಕೆ ಅವಕಾಶ ನೀಡಿದೆ. ಅದರ ಉದ್ದೇಶ ಈಡೇರಬೇಕಿದೆ ಎಂದರು.

ಈ ನಿಟ್ಟಿನಲ್ಲಿ ಸಪ್ತಗಿರಿ ಶಿಕ್ಷಣ ಸಂಸ್ಥೆಯ ಕಾರ್ಯ ಶ್ಲಾಘನೀಯವಾಗಿದೆ ಎಂದರು. ಇದೇ ಸಂದರ್ಭದಲ್ಲಿ  ಸಂಸ್ಥೆಯ ಪರವಾಗಿ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.  ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಎಚ್.ಆರ್.ಬಸಪ್ಪ ಮುಖ್ಯ ಅತಿಥಿಗಳಾಗಿದ್ದರು.

ಗುಲ್ಬರ್ಗ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಪ್ರಾಚಾರ್ಯ ಎಸ್.ಎನ್. ಪಾಂಜಾಳ, ಕ್ಷೇತ್ರ ಶಿಕ್ಷಣಾಧಿಕಾರಿ ಸೂರ್ಯಕಾಂತ ಮದಾನೆ, ಸರ್ಕಾರಿ ನೌಕರರ ಸಂಘದ ಕಾರ್ಯದರ್ಶಿ ಡಿ.ಝಾಕೀರ ಹುಸೇನ್, ಸಪ್ತಗಿರಿ ಸಮೂಹ ಶಿಕ್ಷಣ ಸಂಸ್ಥೆಯ ನಿರ್ದೇಶಕ ಇಂದ್ರಜಿಜ್ ಆನಂದ್ ಕೌರ್, ವೆಂಕಟೇಶ್ವರ ಶಿಕ್ಷಣಸಂಸ್ಥೆಯ ದಯಾನಂದರಾವ್ ವೇದಿಕೆಯಲ್ಲಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT