ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೂಲ ಸೌಕರ್ಯಕ್ಕೆ ಆಗ್ರಹಿಸಿ ಪ್ರತಿಭಟನೆ

Last Updated 25 ಸೆಪ್ಟೆಂಬರ್ 2011, 19:30 IST
ಅಕ್ಷರ ಗಾತ್ರ

ಬೆಂಗಳೂರು: ತುಮಕೂರು ಸರ್ಕಾರಿ ಚಿತ್ರಕಲಾ ಕಾಲೇಜಿಗೆ ಮೂಲ ಸೌಕರ್ಯಗಳನ್ನು ಒದಗಿಸಬೇಕು ಎಂದು ಆಗ್ರಹಿಸಿ ಆ ಕಾಲೇಜಿನ ವಿದ್ಯಾರ್ಥಿಗಳು `ಅಖಿಲ ಭಾರತ ಪ್ರಜಾಸತ್ತಾತ್ಮಕ ವಿದ್ಯಾರ್ಥಿ ಸಂಘಟನೆ~ಯ (ಎಐಡಿಎಸ್‌ಓ) ನೇತೃತ್ವದಲ್ಲಿ ನಗರದ ತಾಂತ್ರಿಕ ಶಿಕ್ಷಣ ನಿರ್ದೇಶನಾಲಯದ ಕಚೇರಿ ಎದುರು ಈಚೆಗೆ ಪ್ರತಿಭಟನೆ ನಡೆಸಿದರು.

ರಾಜ್ಯದಲ್ಲಿರುವ ಎರಡು ಸರ್ಕಾರಿ ಚಿತ್ರಕಲಾ ಕಾಲೇಜುಗಳಲ್ಲಿ ಈ ಕಾಲೇಜು ಸಹ ಒಂದು. 18 ವರ್ಷಗಳಿಂದ ನಡೆಯುತ್ತಿರುವ ಈ ಕಾಲೇಜಿಗೆ ಮೂಲಸೌಕರ್ಯ ಮತ್ತು ಅಗತ್ಯ ಬೋಧಕ-ಬೋಧಕೇತರ ಸಿಬ್ಬಂದಿ ಇಲ್ಲ. ಆದರೂ ಚಿತ್ರಕಲೆಯಲ್ಲಿ ಆಸಕ್ತಿಯುಳ್ಳ ಜಿಲ್ಲೆಯ ಬಡ ವಿದ್ಯಾರ್ಥಿಗಳು ಪ್ರವೇಶ ಪಡೆಯುತ್ತಾರೆ.
 
ಪ್ರವೇಶ ಪಡೆದ ನಂತರ, ಇಲ್ಲಿನ ಸಮಸ್ಯೆಗಳನ್ನು ಅರಿತುಕೊಂಡು ತಮ್ಮ ಓದನ್ನು ಮೊಟಕುಗೊಳಿಸುತ್ತಾರೆ. ಈ ಕಾಲೇಜಿಗೆ ಒಬ್ಬರೂ ಬೋಧಕೇತರ ಸಿಬ್ಬಂದಿ ಇಲ್ಲ. ಒಂದು ವಾರದ ಒಳಗಾಗಿ ಸಿಬ್ಬಂದಿ ನೇಮಕ ಮಾಡಬೇಕು ಎಂದು ಪ್ರತಿಭಟನಾಕಾರರು ಗಡುವು ವಿಧಿಸಿದರು.

ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾನಾಡಿದ ಎಐಡಿಎಸ್‌ಓ ರಾಜ್ಯ ಘಟಕದ ಅಧ್ಯಕ್ಷ ವಿ.ಎನ್.ಆರ್.ಶೇಖರ್, `ಸರ್ಕಾರಕ್ಕೆ ಚಿತ್ರಕಲೆಯ ಬಗ್ಗೆ ಕಾಳಜಿ ಇಲ್ಲ. ಪೇಂಟಿಂಗ್, ಕಲಾ ಇತಿಹಾಸ, ಲೈಫ್ ಪೇಂಟಿಂಗ್, ಗ್ರಾಫಿಕ್ಸ್ ಹಾಗೂ ಶಿಲ್ಪಕಲೆಗೆ ಉಪನ್ಯಾಸಕರನ್ನು ಕೂಡಲೇ ನೇಮಕ ಮಾಡಬೇಕು~ ಎಂದು ಒತ್ತಾಯಿಸಿದರು.

ನಿರ್ದೇಶನಾಲಯದ ಪರವಾಗಿ ಮನವಿ ಸ್ವೀಕರಿಸಿದ ಜಂಟಿ ನಿರ್ದೇಶಕ ಎನ್.ಡಿ.ಪ್ರಸಾದ್, `ಇತ್ತೀಚೆಗಷ್ಟೇ ಈ ಕಾಲೇಜಿನ ಆಡಳಿತ ನಮಗೆ ಹಸ್ತಾಂತರವಾಗಿದೆ. ಆದ್ದರಿಂದ ಈ ಸಮಸ್ಯೆಗಳಿಗೆ ಪರಿಹಾರ ನೀಡಲು ನಿರ್ದೇಶಕರೊಂದಿಗೆ ಚರ್ಚೆ ನಡೆಸುತ್ತೇನೆ~ ಎಂದು ಅವರು ಭರವಸೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT