ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೂಲ ಸೌಲಭ್ಯಕ್ಕೆ ಹೆಚ್ಚು ಆದ್ಯತೆ

Last Updated 25 ಜನವರಿ 2011, 12:25 IST
ಅಕ್ಷರ ಗಾತ್ರ

ಜಾಲಹಳ್ಳಿ: ಮುಂದಿನ 5ವರ್ಷದ ಆಡಳಿತದ ಅವಧಿಯಲ್ಲಿ ಜಿಲ್ಲಾ ಪಂಚಾಯಿತಿ ಕ್ಷೇತ್ರದ ವ್ಯಾಪ್ತಿಯಲ್ಲಿ ಜನತೆಯ ಮೂಲ ಸೌಲಭ್ಯಗಳಾದ ಕುಡಿಯುವ ನೀರು, ರಸ್ತೆ ಹಾಗೂ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡುವ ಮಹತ್ವಕಾಂಕ್ಷೆ ಹೊಂದಿರುವುದಾಗಿ ಜಾಲಹಳ್ಳಿ ಜಿಲ್ಲಾ ಪಂಚಾಯತಿ ಸದಸ್ಯರಾಗಿ ನೂತನ ಸದಸ್ಯೆ ಹರ್ಷಾ ಜಗನ್ನಾಥರಾಯ ಪಾಟೀಲ್.

ಅಭಿವೃದ್ಧಿಯೇ ತಮ್ಮ ಮೂಲ ಮಂತ್ರ ಎನ್ನುವ ಪ್ರಚಾರದೊಂದಿಗೆ ಚುನಾಯಿತರಾಗಿರುವ ಅವರು, ಇಲ್ಲಿಯವರೆಗೂ ನಡೆದ ಚುನಾವ ಣೆಗಳಲ್ಲಿ ಜಾಲಹಳ್ಳಿ ಪಟ್ಟಣ ಹೊರ ತುಪಡಿಸಿ ಗ್ರಾಮೀಣ ಪ್ರದೇಶದಿಂದ ಜಿ.ಪಂ ಕ್ಷೇತ್ರಕ್ಕೆ ಆಯ್ಕೆಯಾದ ಮೊದಲ ಸದಸ್ಯೆಯಾಗಿದ್ದಾರೆ. ಈ ಪ್ರದೇಶದ ವ್ಯಾಪ್ತಿಯಲ್ಲಿ ಕುಡಿಯುವ ನೀರಿನಲ್ಲಿ ಪ್ಲೋರೈಡ್ ಅಂಶ ಹೆಚ್ಚು ಇದ್ದು, ಸಾರ್ವಜನಿಕರು ತೊಂದರೆ ಅನುಭವಿಸುತ್ತಿರುವು ದರಿಂದ ಕುಡಿಯುವ ನೀರಿನ ವ್ಯವಸ್ಥೆಯ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವುದಾಗಿ ಅವರು ತಿಳಿಸುತ್ತಾರೆ.

ಈಗಾಗಲೇ ಕಳೆದ ಜಿ.ಪಂ ಸದಸ್ಯರ ಅನುದಾನದಲ್ಲಿ ಕೈಗೆತ್ತಿಕೊಂಡ ಕಾಮಗಾರಿಗಳು ಕೆಲವು ಪೂರ್ಣ ಗೊಳ್ಳದೇ ಇರುವುದು ಗಮನಕ್ಕೆ ಬಂದಿದ್ದು, ಮುಂದಿನ ದಿನಗಳಲ್ಲಿ ಸೂಕ್ತ ಕ್ರಮ ಕೈಗೊಂಡು ಅವುಗಳನ್ನು ಪೂರ್ಣಗೊಳಿಸಲು ಅಧಿಕಾರಿಗಳ ಮೇಲೆ ಒತ್ತಡ ತರುವುದಾಗಿ ತಿಳಿಸಿದ್ದಾರೆ.

ಪರಾಪೂರು ಕೆರೆಯಿಂದ ನೀರು ಪಡೆದು ಕರಡಿಗುಡ್ಡ ಗ್ರಾ.ಪಂ ವ್ಯಾಪ್ತಿಯ ಹಳ್ಳಿಗಳ ನೀರಾವರಿ ವಂಚಿತ ಪ್ರದೇಶಕ್ಕೆ ನೀರು ಒದಗಿಸುವ ಯೋಜನೆಯ ಅನುಷ್ಠಾನಕ್ಕೆ ಕೂಡಲೇ ಕ್ರಮ ಕೈಗೊಳ್ಳಲಾ ಗುವುದು. ಕ್ಷೇತ್ರದ ವ್ಯಾಪ್ತಿಯ ಪ್ರತಿಯೊಂದು ಹಳ್ಳಿಗಳಲ್ಲಿ ಮಹಿಳಾ ಶೌಚಾಲಯದ ಅವಶ್ಯಕತೆ ಇದ್ದು, ಅದರ ಬಗ್ಗೆ ಸಂಬಂಧಿಸಿದ ಗ್ರಾ.ಪಂ ಅಧಿಕಾರಿಗಳೊಂದಿಗೆ ಚರ್ಚಿಸಿ ಶೌಚಾ ಲಯಗಳ ನಿರ್ಮಾಣಕ್ಕೆ ಆದ್ಯತೆ ನೀಡಲಾಗುವುದು ಎಂದಿದ್ದಾರೆ.

ಬಾಗೂರು, ಮುದುಗೋಟ, ಲಿಂಗದಹಳ್ಳಿ, ಮೇದನಾಪೂರು ಸೇರಿದಂತೆ ಇನ್ನಿತರ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳು ತೀರಾ ಹದಗೆಟ್ಟಿದ್ದು, ಅವುಗಳ ನಿರ್ಮಾ ಣಕ್ಕಾಗಿ ತಮ್ಮ ಅನುದಾನದಲ್ಲಿ ಹಣ ಮಂಜೂರು ಮಾಡಿಸುವ ಭರವಸೆ  ಚುನಾವಣೆಯ ಸಂದರ್ಭದಲ್ಲಿ ನೀಡಿದ್ದು, ಅದರಂತೆ ಮಾತು ಕೊಟ್ಟಂತೆ ನಡೆದುಕೊಳ್ಳುವುದಾಗಿ ತಿಳಿಸಿದರು.

ಜಾಲಹಳ್ಳಿ ಪಟ್ಟಣ ಸಾಕಷ್ಟು ಮುಂದುವರೆದಿದ್ದರೂ ಅನೇಕ ಸಮಸ್ಯೆಗಳನ್ನು ಒಳಗೊಂಡಿದ್ದು, ಅವುಗಳಲ್ಲಿ ಪ್ರಮುಖವಾದ ವಿದ್ಯಾ ರ್ಥಿನಿಯರ ಹಾಸ್ಟೆಲ್ ಮಂಜೂರು, ಪದವಿ ಪೂರ್ವ ಕಾಲೇಜು ಕಟ್ಟಡ ಪೂರ್ಣಗೊಳಿಸುವುದು, ಬಸ್ ನಿಲ್ದಾಣವನ್ನು ಸಾರಿಗೆ ಇಲಾಖೆಗೆ ಒಪ್ಪಿಸುವುದು ಹಾಗೂ ನಿಲ್ದಾಣದಲ್ಲಿ ಮೂಲ ಸೌಕರ್ಯ ಒದಗಿಸುವುದು ಮತ್ತು ಪಟ್ಟಣಕ್ಕೆ ಕುಡಿಯುವ ನೀರು ಪೂರೈಸುವ ಯೋಜನೆ ಶೀಘ್ರ ಪೂರ್ಣಗೊಳಿಸುವುದು ಸೇರಿದಂತೆ ಇನ್ನಿತರ ಸಮಸ್ಯೆಗಳ ಬಗ್ಗೆ ಸ್ಥಳೀಯ ಮುಖಂಡರ ಸಲಹೆ ಪಡೆದು ಎಲ್ಲರ ಸಹಕಾರದೊಂದಿಗೆ ಪಟ್ಟಣದ ಅಭಿವೃದ್ಧಿಗೆ ಶ್ರಮಿಸುವುದಾಗಿ ತಿಳಿಸಿದರು.

ಜಾಲಹಳ್ಳಿ ಗ್ರಾಮ ಪಂಚಾಯಿತಿ ಯನ್ನು ಪಟ್ಟಣ ಪಂಚಾಯತಿ ಯನ್ನಾಗಿ ಮೇಲ್ದರ್ಜೆಗೆ ಏರಿಸಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು. ಆರೋಗ್ಯ ಇಲಾಖೆಗೆ ಸಂಬಂಧಿಸಿದಂತೆ ಗಾಣಧಾಳ ಹಾಗೂ ಚಿಂಚೋಡಿ ಗ್ರಾಮಗಳಿಗೆ ಮಂಜೂರಾಗಿರುವ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಶೀಘ್ರ ಪ್ರಾರಂಭಿಸಿ ಅವುಗಳಿಗೆ ಅಗತ್ಯ ಸೌಕರ್ಯಗಳನ್ನು ಒದಗಿಸಲು ಅಧಿಕಾರಿಗಳ ಗಮನಕ್ಕೆ ತರುವುದಾಗಿ ತಿಳಿಸಿದ್ದಾರೆ.

ಕ್ಷೇತ್ರದ ವ್ಯಾಪ್ತಿಯಲ್ಲಿ ಉದ್ಯೋಗ ಖಾತರಿ ಯೋಜನೆಯ ಸಮರ್ಪಕ ನಿರ್ವಹಣೆಗಾಗಿ ಸಂಬಂಧಿಸಿದ ಅಧಿ ಕಾರಿಗಳೊಂದಿಗೆ ಚರ್ಚಿಸಿ ಕೂಲಿಕಾ ರ್ಮಿಕರು ವಲಸೆ ಹೋಗುವುದನ್ನು ತಪ್ಪಿಸಲು ಯೋಜನೆಯನ್ನು ಸೂಕ್ತ ರೀತಿಯಲ್ಲಿ ಜಾರಿ ಮಾಡಲಾಗುವುದು ಎಂದು ತಿಳಿಸಿದರು.

ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಪಣತೊಟ್ಟಿದ್ದು, ಇದಕ್ಕೆ ಎಲ್ಲರ ಸಹಕಾರ ಅಗತ್ಯವಾಗಿದ್ದು ಅದಕ್ಕಾಗಿ ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಲು ಜಾಲಹಳ್ಳಿ ಪಟ್ಟಣದಲ್ಲಿ ಶೀಘ್ರದಲ್ಲಿ ತಮ್ಮ ಕಾರ್ಯಾಲಯವೊಂದನ್ನು ತೆರೆ ಯುವುದಾಗಿ ಅವರು ‘ಪ್ರಜಾವಾಣಿ’ಗೆ ತಿಳಿಸಿದರು.
ಅಲಿಬಾಬಾ ಪಟೇಲ್ ಜಾಲಹಳ್ಳಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT