ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೂಲಸೌಕರ್ಯ ಆಗ್ರಹಿಸಿ ಪ್ರತಿಭಟನೆ

Last Updated 22 ಸೆಪ್ಟೆಂಬರ್ 2011, 8:15 IST
ಅಕ್ಷರ ಗಾತ್ರ

ತುಮಕೂರು: ನಗರದ ಸರ್ಕಾರಿ ಚಿತ್ರಕಲಾ ಮಹಾವಿದ್ಯಾಲಯಕ್ಕೆ ಉಪನ್ಯಾಸಕರು ಹಾಗೂ ಇನ್ನಿತರ ಮೂಲಸೌಲಭ್ಯ ಒದಗಿಸುವಂತೆ ಆಗ್ರಹಿಸಿ ಬೆಂಗಳೂರಿನ ತಾಂತ್ರಿಕ ಶಿಕ್ಷಣ ಇಲಾಖೆ ಕಚೇರಿ ಮುಂದೆ ಆಲ್ ಇಂಡಿಯಾ ಡೆಮಾಕ್ರೆಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಷನ್ (ಎಐಡಿಎಸ್‌ಓ) ನೇತೃತ್ವದಲ್ಲಿ ಬುಧವಾರ ಪ್ರತಿಭಟನೆ ನಡೆಸಲಾಯಿತು.

ಎಐಡಿಎಸ್‌ಓ ರಾಜ್ಯ ಘಟಕದ ಅಧ್ಯಕ್ಷ ವಿ.ಎನ್.ರಾಜಶೇಖರ್ ಮಾತನಾಡಿ, ಶಿಕ್ಷಣದ ವ್ಯಾಪಾರೀಕರಣ, ಖಾಸಗೀಕರಣ ಮಾಡಲಾಗುತ್ತಿದೆ. ಹೀಗಾಗಿ ಸರ್ಕಾರಿ ಶಾಲಾ, ಕಾಲೇಜುಗಳಿಗೆ ಅನುದಾನ ನೀಡದೆ ಅವುಗಳು ತಾನೇತಾನಾಗಿ ಸಾಯುವಂತಹ ಪರಿಸ್ಥಿತಿಯನ್ನು ಸೃಷ್ಟಿಸಲಾಗುತ್ತಿದೆ ಎಂದು ಆರೋಪಿಸಿದರು.

ಆವಿಷ್ಕಾರ- ಪ್ರಗತಿಪರ ಸಾಂಸ್ಕೃತಿಕ ವೇದಿಕೆ ರಾಜ್ಯ ಸಮಿತಿ ಸದಸ್ಯ ಎಸ್.ಎನ್.ಸ್ವಾಮಿ ಮಾತನಾಡಿ, ರಾಜ್ಯದಲ್ಲಿ ಎರಡು ಸರ್ಕಾರಿ ಚಿತ್ರಕಲಾ ಮಹಾವಿದ್ಯಾಲಯಗಳಿದ್ದು, ಅದರಲ್ಲೊಂದು ತುಮಕೂರಿನಲ್ಲಿ ಇರುವುದು ಹೆಮ್ಮೆಯ ವಿಷಯ. ಆದರೆ ಸುಮಾರು 18 ವರ್ಷಗಳಿಂದ ಈ ಕಾಲೇಜಿಗೆ ಸಮರ್ಪಕ ಸಿಬ್ಬಂದಿ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮುಖಂಡರಾದ ಹನುಮೇಶ್, ಸುಧಾರಾಜ್, ಈಶ್ವರ್ ಮಾತನಾಡಿದರು. ವಿವಿಧ ಬೇಡಿಕೆಗಳ ಮನವಿ ಪತ್ರ ಸ್ವೀಕರಿಸಿದ ತಾಂತ್ರಿಕ ಶಿಕ್ಷಣ ಇಲಾಖೆ ಜಂಟಿ ನಿರ್ದೇಶಕ ಎನ್.ಡಿ.ಪ್ರಸಾದ್ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT