ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

`ಮೂಲಸೌಕರ್ಯ ಒದಗಿಸಲು ಸರ್ಕಾರ ಬದ್ಧ'

Last Updated 5 ಆಗಸ್ಟ್ 2013, 19:59 IST
ಅಕ್ಷರ ಗಾತ್ರ

ಯಲಹಂಕ: `ಪ್ರಣಾಳಿಕೆಯಲ್ಲಿ ನೀಡಿರುವ ಬಹುತೇಕ ಭರವಸೆಗಳನ್ನು ಈಡೇರಿಸುವ ಪ್ರಯತ್ನ ಮಾಡುವ ಮೂಲಕ ನಗರಕ್ಕೆ ಅಗತ್ಯವಿರುವ ಮೂಲಸೌಕರ್ಯಗಳನ್ನು ಒದಗಿಸಲು ಕಾಂಗ್ರೆಸ್ ಸರ್ಕಾರ ಬದ್ಧವಾಗಿದೆ' ಎಂದು ಮುಖ್ಯಮಂತ್ರಿ ಸಿದ್ದರಾಯಯ್ಯ ಹೇಳಿದರು.

ಬ್ಯಾಟರಾಯನಪುರ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ವತಿಯಿಂದ ಬಳ್ಳಾರಿ ರಸ್ತೆಯ ಬ್ಯಾಟರಾಯನಪುರದ ಎಪಿಎಂಸಿ ಮೈದಾನದಲ್ಲಿ ಭಾನುವಾರ ಆಯೋಜಿಸಿದ್ದ ಕಾರ್ಯಕರ್ತರ ಸಮಾವೇಶದಲ್ಲಿ ಅವರು ಮಾತನಾಡಿದರು.
`ನಾವು ಜನರಿಗೆ ಕೊಟ್ಟಿದ್ದ 169 ಭರವಸೆಗಳಲ್ಲಿ ಈಗಾಗಲೇ 60ಕ್ಕೂ ಹೆಚ್ಚು ಭರವಸೆಗಳನ್ನು ಈಡೇರಿಸುವ ಪ್ರಯತ್ನ ಮಾಡಿದ್ದೇವೆ' ಎಂದರು.

ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ದಿನೇಶ್ ಗುಂಡೂರಾವ್ ಮಾತನಾಡಿ, `ಅನ್ನಭಾಗ್ಯ ಯೋಜನೆಯಡಿ ಸೆಪ್ಟೆಂಬರ್ ತಿಂಗಳಿನಿಂದ ಅಕ್ಕಿಯ ಜೊತೆಗೆ ಸ್ವಲ್ಪ ಗೋಧಿಯನ್ನು ನೀಡಲಾಗುವುದು. ರಾಜ್ಯದಲ್ಲಿ 98 ಲಕ್ಷ ಬಿಪಿಎಲ್ ಕಾರ್ಡುಗಳಿವೆ.  ಹೊಸದಾಗಿ 20 ಲಕ್ಷ ಅರ್ಜಿಗಳು ಬಂದಿದ್ದು, ಇವುಗಳನ್ನು ಪರಿಶೀಲಿಸಿ 2-3 ತಿಂಗಳಲ್ಲಿ ವಿಲೇವಾರಿ ಮಾಡಲಾಗುವುದು. ಸರಿಯಾಗಿ ಕಾರ್ಯನಿರ್ವಹಿಸದ ಹಲವಾರು ಕಡೆಗಳಲ್ಲಿ ನ್ಯಾಯಬೆಲೆ ಅಂಗಡಿಗಳ ಪರವಾನಗಿಯನ್ನು ರದ್ದುಪಡಿಸಿ, ಅಧಿಕಾರಿಗಳ ವಿರುದ್ಧವೂ ಕ್ರಮ ಕೈಗೊಳ್ಳಲಾಗಿದೆ' ಎಂದರು.

ಗೃಹ ಸಚಿವ ಕೆ.ಜೆ ಜಾರ್ಜ್, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಕೃಷಿ ಸಚಿವ ಕೃಷ್ಣಬೈರೇಗೌಡ, ಶಾಸಕರಾದ ಎಸ್.ಟಿ.ಸೋಮಶೇಖರ್, ಎಂಟಿಬಿ ನಾಗರಾಜ್, ಬೈರತಿ ಬಸವರಾಜ್, ಶಿವಣ್ಣ, ವೆಂಕಟರಮಣಯ್ಯ, ಮುನಿರತ್ನ, ವಿಧಾನ ಪರಿಷತ್ ಸದಸ್ಯರಾದ ಆರ್.ವಿ.ವೆಂಕಟೇಶ್, ದಯಾನಂದರೆಡ್ಡಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT