ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೂಲಸೌಕರ್ಯಕ್ಕೆ ಆಗ್ರಹ

Last Updated 21 ಜುಲೈ 2012, 19:30 IST
ಅಕ್ಷರ ಗಾತ್ರ

ಚನ್ನಪಟ್ಟಣ: ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಮೂಲಸೌಕರ್ಯ ಒದಗಿಸುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಹಾಗೂ ಸರ್ಕಾರಿ ಪಾಲಿಟೆಕ್ನಿಕ್ ವಿದ್ಯಾರ್ಥಿಗಳು ಶುಕ್ರವಾರ ಪಟ್ಟಣದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು.

ಬೆಂಗಳೂರು-ಮೈಸೂರು ಹೆದ್ದಾರಿ ಸೇರಿದಂತೆ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು ಸರ್ಕಾರವು ಪಾಲಿಟೆಕ್ನಿಕ್ ಕಾಲೇಜುಗಳನ್ನು ಕಡೆಗಣಿಸಿದೆ. ಇಲ್ಲಿ ಕನಿಷ್ಠ ಮೂಲಭೂತ ಸೌಕರ್ಯಗಳು ಇಲ್ಲದೇ ವಿದ್ಯಾರ್ಥಿಗಳು ಪ್ರತಿನಿತ್ಯ ಪರಿತಪಿಸುವಂತಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸರ್ಕಾರ ವಿದ್ಯಾರ್ಥಿಗಳಿಗೆ ಯಾವುದೇ ಮುನ್ಸೂಚನೆ ನೀಡದೆ ಹೊಸ ಪ್ರವೇಶಪದ್ಧತಿ ಜಾರಿಗೊಳಿಸಿದ್ದು, ಇದರಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ. ಇದನ್ನು ಹಿಂಪಡೆಯಬೇಕು. 2013-14ನೇ ಸಾಲಿನಿಂದ ಹಿಂದಿನ ಪ್ರವೇಶ ನೀತಿಯನ್ನೇ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಎಬಿವಿಪಿ ರಾಜ್ಯ ಸಹಕಾರ್ಯದರ್ಶಿ ಸುನೀಲ್ ಕುಮಾರ್ ಮಾತನಾಡಿ, ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ ಉಪನ್ಯಾಸಕರ ಕೊರತೆ, ಕಟ್ಟಡ ಕೊರತೆ, ಪ್ರಯೋಗಾಲಯ ಕೊರತೆ ಸೇರಿದಂತೆ ಹಲವಾರು ಸಮಸ್ಯೆಗಳು ತಾಂಡವವಾಡುತ್ತಿವೆ. ಇದರಿಂದ ವಿದ್ಯಾರ್ಥಿಗಳ ಭವಿಷ್ಯದ ಮೇಲೆ ಪರಿಣಾಮ ಉಂಟಾಗುತ್ತಿದೆ.

ಸರ್ಕಾರವು ಈ ಎಲ್ಲಾ ಸಮಸ್ಯೆಗಳನ್ನು ಗಮನಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ನಂತರ ಈ ಬಗ್ಗೆ ತಹಸೀಲ್ದಾರ್ ಅವರಿಗೆ ಮನವಿ ಪತ್ರ ಅರ್ಪಿಸಲಾಯಿತು.

ಪ್ರತಿಭಟನೆಯಲ್ಲಿ ಎಬಿವಿಪಿ ಸಂಚಾಲಕರಾದ ರಘುರಾಜು, ಕಿರಣ್, ಅರುಣ್ ಅನಿಲ್, ವಿಕಾಸ್, ರಾಘು, ನಗರ ಸಹಕಾರ್ಯದರ್ಶಿ ನಿಶಾಂತ್, ರಾಹುಲ್, ರಾಜು ಇತರರು ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT