ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೂವರೂ ಉತ್ತಮರು

Last Updated 9 ಫೆಬ್ರುವರಿ 2012, 19:30 IST
ಅಕ್ಷರ ಗಾತ್ರ

ಮಂಗಳೂರು: ಲಕ್ಷ್ಮಣ ಸವದಿ, ಸಿ.ಸಿ. ಪಾಟೀಲ್ ಅತ್ಯುತ್ತಮ ಸಚಿವರಾಗಿದ್ದರು. ಉತ್ತಮ ಕೆಲಸ ಮಾಡಿದ್ದರು. ಕೃಷ್ಣ ಪಾಲೆಮಾರ್ ಸಹ ಒಳ್ಳೆಯ ಕೆಲಸ ಮಾಡಿದ್ದರು~ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮೂವರೂ ಮಾಜಿ ಸಚಿವರನ್ನು ಸಮರ್ಥಿಸಿಕೊಂಡರು.

ಖಾಸಗಿ ಕಾರ್ಯಕ್ರಮಕ್ಕಾಗಿ ಜಿಲ್ಲೆಗೆ ಭೇಟಿ ನೀಡಿದ್ದ ಅವರು ಗುರುವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, `ಘಟನೆ ನಡೆದ 24 ಗಂಟೆಗಳೊಳಗೆ ಮೂವರೂ ಸಚಿವರು ಸ್ವಯಂಪ್ರೇರಿತರಾಗಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಸದನ ಸಮಿತಿ ರಚಿಸಿ ತಿಂಗಳೊಳಗೆ ವರದಿ ನೀಡುವಂತೆ ಸ್ಪೀಕರ್ ಸೂಚಿಸಿದ್ದಾರೆ. ತಿಂಗಳಲ್ಲಿ ಸತ್ಯ ಹೊರಬರಲಿದೆ. ಅವರು ನಿರಪರಾಧಿಗಳು ಎಂಬುದು ಸಾಬೀತಾಗಲಿದೆ~ ಎಂದರು.

`ಈ ಘಟನೆ ಮಾಧ್ಯಮಗಳ ಸೃಷ್ಟಿ. ನಿಜವಾದ ಅಪರಾಧಿ ಯಾರು ಎಂಬುದು ಕೆಲವೇ ದಿನಗಳಲ್ಲಿ ಗೊತ್ತಾಗುತ್ತದೆ. ಎಲೆಕ್ಟ್ರಾನಿಕ್ ಮಾಧ್ಯಮಗಳ ಅತಿರಂಜಿತ ವರದಿಯನ್ನು ಜನರೂ ಗಮನಿಸುತ್ತಿದ್ದಾರೆ. ಸತ್ಯ ಬಹಿರಂಗಗೊಂಡ ಬಳಿಕ ನಾವು ಜನರ ಬಳಿಗೆ ಹೋಗುತ್ತೇವೆ~ ಎಂದರು.

ಮೂವರು ಮಾಜಿ ಸಚಿವರಿಗೂ ಅವರ ಕ್ಷೇತ್ರದಲ್ಲಿ ಯಾವ ತೊಂದರೆಯೂ ಆಗುವುದಿಲ್ಲ. ಅವರ ಗ್ರಹಚಾರ ಸರಿ ಇರಲಿಲ್ಲ. ಕೆಟ್ಟ ಕಾಲ ಅಷ್ಟೆ~ ಎಂದರು. ಉಡುಪಿಯ ಮಲ್ಪೆಯಲ್ಲಿನ `ಸ್ಪ್ರಿಂಕ್ ಝೂನ್~ ಉತ್ಸವದಲ್ಲಿ ಸ್ವಲ್ಪ ಕೆಟ್ಟದ್ದು ಆಗಿದೆ. ಕಾನೂನು ಪ್ರಕಾರ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಹೇಳಿದ್ದಾರೆ. ಎಲ್ಲ ವಿಚಾರಕ್ಕೂ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರೆ ಆಡಳಿತ ನಡೆಸುವುದು ಕಷ್ಟ~ ಎಂದು ಪ್ರತಿಕ್ರಿಯಿಸಿದರು.
ಕೈಗಾರಿಕಾ ಸಚಿವ ಮುರುಗೇಶ ನಿರಾಣಿ ಜತೆಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT