ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೆಣಸಗಿ: ಲಿಂಗಬಸವೇಶ್ವರ ರಥೋತ್ಸವ

Last Updated 26 ಆಗಸ್ಟ್ 2011, 6:20 IST
ಅಕ್ಷರ ಗಾತ್ರ

ಮೆಣಸಗಿ (ತಾ.ರೋಣ): ತಾಲ್ಲೂಕಿನ ಮೆಣಸಗಿ ಗ್ರಾಮದಲ್ಲಿ ಲಿಂಗಬಸವೇಶ್ವರ ಮಠದ ವಾರ್ಷಿಕ ಜಾತ್ರಾ ಮಹೋ ತ್ಸವದ ಅಂಗವಾಗಿ ಗುರುವಾರ ಸಂಜೆ ರಥೋತ್ಸವ ವಿಜೃಂಭಣೆಯಿಂದ ಜರುಗಿತು.
ರಥೋತ್ಸವ ಡೊಳ್ಳು ಕುಣಿತ, ಹೆಜ್ಚೆಮೇಳ, ಭಜನೆ, ಜಾಂಜ್‌ಮೇಳ ಇತರ ವಾದ್ಯಗಳೊಂದಿಗೆ ಊರಿನ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು. ಈ ಸಂದರ್ಭದಲ್ಲಿ ಭಕ್ತರು ಉತ್ತತ್ತಿ ಬಾಳೆಹಣ್ಣುಗಳನ್ನು ಎಸೆದರು. ಹರ ಹರ ಮಹದೇವ... ಎನ್ನುತ್ತಾ ರಥವನ್ನು ಎಳೆದರು.

ಜಾತ್ರಾ ಮಹೋತ್ಸವದ ಅಂಗವಾಗಿ ಬೆಳಿಗ್ಗೆ ಕರ್ತೃ ಗದ್ದುಗೆಗೆ ರುದ್ರಾಭಿಷೇಕ ನಡೆಯಿತು. ಲಿಂಗಬಸವೇಶ್ವರರ ಭಕ್ತಿ ಗೀತೆಗಳ ಧ್ವನಿ ಸುರಳಿಯನ್ನು ಬಿಡುಗಡೆ ಮಾಡಲಾಯಿತು.

ಭಕ್ತರಿಗೆ ಮಾದಲಿಯನ್ನು ಪ್ರಸಾದವನ್ನಾಗಿ ಈ ಸಂದರ್ಭದಲ್ಲಿ ವಿತರಿಸಲಾಯಿತು. ನಂತರ ವಿವಿಧ ಸಾಂಸ್ಕೃತಿಕ ಮತ್ತು ಮನರಂಜನೆ ಕಾರ್ಯಕ್ರಮಗಳು ನಡೆದವು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT