ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೇಘಾಲಯ ಕಲಾವಿದರ ನೃತ್ಯ

Last Updated 16 ಡಿಸೆಂಬರ್ 2012, 19:59 IST
ಅಕ್ಷರ ಗಾತ್ರ

ಬೆಂಗಳೂರು: ಮೇಘಾಲಯ ಮತ್ತು ಕರ್ನಾಟಕ ಸರ್ಕಾರದ ಸಾಂಸ್ಕೃತಿಕ ವಿನಿಮಯ ಕಾರ್ಯಕ್ರಮ ರವೀಂದ್ರ ಕಲಾಕ್ಷೇತ್ರದಲ್ಲಿ ಭಾನುವಾರ ನಡೆಯಿತು.
ಮೇಘಾಲಯದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಸಚಿವ ಅಬು ತಹೇರ್ ಮೊಂಡೆಲ್ ಮಾತನಾಡಿ, `ಒಂದು ಕಾಲದಲ್ಲಿ ಮೇಘಾಲಯ ಶಿಕ್ಷಣ ಹಾಗೂ ಉದ್ಯೋಗ ಕ್ಷೇತ್ರದಲ್ಲಿ ಹೆಸರುವಾಸಿಯಾಗಿತ್ತು. ಆದರೆ, ಇಂದು ಈ ಎರಡೂ ಕ್ಷೇತ್ರಗಳಲ್ಲೂ ರಾಜ್ಯಕ್ಕೆ ಹಿನ್ನಡೆಯಾಗಿದೆ. ಈ ಕಾರಣಕ್ಕಾಗಿ ಶಿಕ್ಷಣಕ್ಕಾಗಿ ಬೆಂಗಳೂರಿನಂತಹ ನಗರಗಳಿಗೆ ಜನರು ವಲಸೆ ಬರುತ್ತಿದ್ದಾರೆ. ಮುಂಬರುವ ದಿನಗಳಲ್ಲಿ ಉತ್ತಮ ಸಂಬಂಧ ಇಟ್ಟುಕೊಳ್ಳುವ ನಿಟ್ಟಿನಲ್ಲಿ ಮೊದಲ ಸಾಂಸ್ಕೃತಿಕ ವಿನಿಮಯ ಹಮ್ಮಿಕೊಳ್ಳಲಾಗಿದೆ' ಎಂದರು.

`ಮೇಘಾಲಯದ ವಾರ್ತಾ ಇಲಾಖೆಯಲ್ಲಿ ಒಂದು ಘಟಕವನ್ನು ಸ್ಥಾಪಿಸಲಾಗಿದ್ದು, ಬೇರೆ ರಾಜ್ಯಗಳಲ್ಲಿ ನೆಲೆಸಿರುವ ಮೇಘಾಲಯದ ಜನರು ಸಮಸ್ಯೆಯಲ್ಲಿ ಸಿಲುಕಿದಾಗ ಈ ಘಟಕವನ್ನು ಸಂಪರ್ಕಿಸಬಹುದು' ಎಂದು ತಿಳಿಸಿದರು.

ಸಮಾರಂಭದಲ್ಲಿ ಮೇಘಾಲಯದ ಕಲಾವಿದರು ವಿವಿಧ ನೃತ್ಯಗಳನ್ನು ಹಾಗೂ ರಾಜ್ಯದ ಕಲಾವಿದರು ಡೊಳ್ಳು ಕುಣಿತ, ಭರತನಾಟ್ಯ, ಕೊಡವ ನೃತ್ಯ  ಪ್ರದರ್ಶಿಸಿದರು.

ಮೇಘಾಲಯದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನಿರ್ದೇಶಕ ಎಚ್‌ಎಂ.ಶಾಂಗ್‌ಪ್ಲಿಯಾಂಗ್ ಉಪಸ್ಥಿತರಿದ್ದರು.

ಉಪನ್ಯಾಸ ಕಾರ್ಯಕ್ರಮ
ಬೆಂಗಳೂರು: ಬಸವ ಸಮಿತಿಯ ವತಿಯಿಂದ ಅರಿವಿನ ಮನೆ 741ನೇ ಜ್ಞಾನ ದಾಸೋಹ ಕಾರ್ಯಕ್ರಮದ ಅಂಗವಾಗಿ ಸೋಮವಾರ (ಡಿ.17) `ಆರೋಗ್ಯ ಮತ್ತು ಆಯುರ್ವೇದ' ವಿಷಯ ಕುರಿತು ಉಪನ್ಯಾಸ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ರಾಜ್ಯ ಲೇಖಕಿಯರ ಸಂಘದ ಅಧ್ಯಕ್ಷೆ ಡಾ.ವಸುಂಧರ ಭೂಪತಿ ಉಪನ್ಯಾಸ ನೀಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ

ವಿಳಾಸ: ಅರಿವಿನ ಮನೆ, ಬಸವ ಭವನ, ಬಸವೇಶ್ವರ ರಸ್ತೆ. ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ: 2226 5505.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT