ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೇಘಾಲಯ: ಕಾಂಗ್ರೆಸ್ ಶಾಸಕರ ಬಂಡಾಯ

Last Updated 5 ಜೂನ್ 2011, 19:30 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಮೇಘಾಲಯದ ಮುಖ್ಯಮಂತ್ರಿ ಮುಕುಲ್ ಸಂಗ್ಮಾ ಅವರ ವಿರುದ್ಧ ಬಂಡಾಯ ಎದ್ದಿರುವ 18 ಕಾಂಗ್ರೆಸ್ ಶಾಸಕರು ನಾಯಕತ್ವದ ಶೀಘ್ರ ಬದಲಾವಣೆಗೆ ಬಿಗಿಪಟ್ಟು ಹಿಡಿದಿದ್ದಾರೆ.

ಯುಡಿಪಿ, ಎಚ್‌ಎಸ್‌ಪಿಡಿಪಿ ಮತ್ತು ಸ್ವತಂತ್ರ ಶಾಸಕರ ಸಹಾಯದಿಂದ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್‌ಗೆ ಪಕ್ಷದ ಶಾಸಕರೇ ಬಂಡಾಯ ಎದ್ದಿರುವುದು ಕಗ್ಗಂಟಾಗಿ ಪರಿಣಮಿಸಿದೆ. 60 ಸದಸ್ಯ ಬಲದ ಶಾಸನಸಭೆಯಲ್ಲಿ ಪಕ್ಷ 28 ಸದಸ್ಯರನ್ನು ಹೊಂದಿದೆ. ಸರ್ಕಾರದ ಒಂಬತ್ತು ಕಾಂಗ್ರೆಸ್ ಸಚಿವರಲ್ಲಿ ಉಪಮುಖ್ಯಮಂತ್ರಿ ರೊವೆಲ್ ಲಿಂಗ್ಡೊ ಸೇರಿದಂತೆ ಆರು ಸಚಿವರು ಸಂಗ್ಮಾ ಅವರ ನಾಯಕತ್ವದಲ್ಲಿ ವಿಶ್ವಾಸ ಕಳೆದುಕೊಂಡಿರುವುದಾಗಿ ಭಿನ್ನಮತೀಯರು ಹೇಳಿದ್ದಾರೆ.
 
ಮುಖ್ಯಮಂತ್ರಿ ಸ್ಥಾನದಿಂದ ಸಂಗ್ಮಾ ಅವರನ್ನು ಕೆಳಗಿಳಿಸಿ ಬೇರೆ ನಾಯಕನನ್ನು ಆಯ್ಕೆ ಮಾಡುವಂತೆ ಪಕ್ಷದ ಹೈಕಮಾಂಡ್ ಮೇಲೆ ಒತ್ತಡ ಹೇರಲು 15 ಬಂಡಾಯ ಶಾಸಕರು ದೆಹಲಿಯಲ್ಲಿ ಬೀಡು ಬಿಟ್ಟ್ದ್ದಿದು,  ಸಂಗ್ಮಾ ನಾಯಕತ್ವದ ವಿರುದ್ಧ ಸಹಿ ಮಾಡಿರುವ ಪತ್ರವನ್ನು ಸೋನಿಯಾ ಗಾಂಧಿ ಅವರಿಗೆ ಸಲ್ಲಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT