ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೇಣದ ಬತ್ತಿ ತಯಾರಿಕೆ: ಕನಿಮೊಳಿ ಆಸಕ್ತಿ

Last Updated 22 ಜೂನ್ 2011, 19:30 IST
ಅಕ್ಷರ ಗಾತ್ರ

ನವ ದೆಹಲಿ (ಪಿಟಿಐ): 2ಜಿ ಸ್ಪೆಕ್ಟ್ರಂ ಹಗರಣಕ್ಕೆ ಸಂಬಂಧಿಸಿದಂತೆ ತಿಹಾರ್ ಜೈಲಿನಲ್ಲಿರುವ ಡಿಎಂಕೆ ಸಂಸದೆ ಕನಿಮೊಳಿ ಅವರು ಸಾಹಿತ್ಯ ಕೃತಿಗಳ ಓದಿನ ಜತೆಗೆ ಮೇಣದ ಬತ್ತಿ ತಯಾರಿಸುವುದಕ್ಕೆ ಸಂಬಂಧಿಸಿದಂತೆ ತರಬೇತಿಯನ್ನೂ ಪಡೆಯುತ್ತಿದ್ದಾರೆ.

ಜೈಲಿನಲ್ಲಿರುವ ಇತರ ಮಹಿಳಾ ಕೈದಿಗಳೊಂದಿಗೆ ಕನಿಮೊಳಿ ಅವರು ಕುಳಿತು ಮೇಣದ ಬತ್ತಿ ತಯಾರಿಕೆಯ ಕೆಲಸದಲ್ಲಿ ತೊಡಗಿಸಿಕೊಂಡಿದ್ದಾರೆ. ಕಳೆದ ಒಂದು ತಿಂಗಳಿನಿಂದಲೂ ಜೈಲಿನಲ್ಲಿರುವ ಇವರು ಮೇಣದ ಬತ್ತಿ ತಯಾರಿಕೆಯಲ್ಲಿ ಬಹಳ ಆಸಕ್ತಿ ತೋರುತ್ತಿದ್ದಾರೆ ಎಂದು ಜೈಲಿನ ಮೂಲಗಳು ತಿಳಿಸಿವೆ.ತಿಹಾರ್ ಜೈಲಿನಲ್ಲಿ ಮೇಣದ ಬತ್ತಿ ತಯಾರಿಕೆಯನ್ನು ಜೈಲಿನಲ್ಲಿರುವ ಕೈದಿಗಳಿಗೆ ವೃತ್ತಿ ಶಿಕ್ಷಣವನ್ನಾಗಿ ನೀಡಲಾಗುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT