ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೇಯರ್ ಆಯ್ಕೆಗೆ ಇಂದು ಸಭೆ

Last Updated 1 ಸೆಪ್ಟೆಂಬರ್ 2013, 19:53 IST
ಅಕ್ಷರ ಗಾತ್ರ

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ನೂತನ ಮೇಯರ್ ಆಯ್ಕೆಗೆ ಬುಧವಾರ (ಸೆ. 4) ಚುನಾವಣೆ ನಡೆಯಲಿದ್ದು, ಈ ಕುರಿತು ಚರ್ಚಿಸಲು ಬಿಜೆಪಿಯು ನಗರದ ಶಾಸಕರ ಸಭೆಯನ್ನು ಸೋಮವಾರ ಕರೆದಿದೆ.


ಮಲ್ಲೇಶ್ವರದ ಪಕ್ಷದ ಕಚೇರಿಯಲ್ಲಿ ಮಧ್ಯಾಹ್ನ 12.30ಕ್ಕೆ ಸಭೆ ಕರೆದಿದ್ದು, ಅಲ್ಲಿ ಎಲ್ಲರ ಅಭಿಪ್ರಾಯದಂತೆ ಹೊಸ ಮೇಯರ್ ಆಯ್ಕೆ ನಡೆಯಲಿದೆ ಎಂದು ಗೊತ್ತಾಗಿದೆ.

ಪಾಲಿಕೆಯಲ್ಲಿ ಬಿಜೆಪಿಗೆ ಬಹುಮತ ಇರುವ ಕಾರಣ ಆ ಪಕ್ಷದವರು ಮೇಯರ್ ಆಗುವುದು ಖಚಿತ. ಉಪ ಮೇಯರ್ ಸ್ಥಾನವನ್ನು ಪರಿಶಿಷ್ಟ ಪಂಗಡದ ಮಹಿಳೆಗೆ ಮೀಸಲಿಟ್ಟಿದ್ದು, ಆ ವರ್ಗಕ್ಕೆ ಸೇರಿದವರು ಬಿಜೆಪಿಯಲ್ಲಿ ಇಲ್ಲ. ಕಾಂಗ್ರೆಸ್‌ನಲ್ಲಿ ಈ ವರ್ಗಕ್ಕೆ ಸೇರಿದ ಇಂದಿರಾ ಎಂಬುವರು ಇದ್ದು, ಅವರು ಅವಿರೋಧವಾಗಿ ಆಯ್ಕೆಯಾಗುವುದು ಖಚಿತವಾಗಿದೆ. ಸಂಸದ ಅನಂತಕುಮಾರ್ ಮತ್ತು ಶಾಸಕ ಆರ್.ಅಶೋಕ ನೇತೃತ್ವದಲ್ಲಿ ಶಾಸಕರ ಸಭೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT