ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೈಲಾರ ಜಾತ್ರೆಗೆ ಭದ್ರಾ ಜಲಾಶಯದಿಂದ ನೀರು

Last Updated 3 ಫೆಬ್ರುವರಿ 2011, 6:05 IST
ಅಕ್ಷರ ಗಾತ್ರ

ಶಿವಮೊಗ್ಗ: ಬಳ್ಳಾರಿ ಜಿಲ್ಲೆಯ ಹೂವಿನ ಹಡಗಲಿ ತಾಲ್ಲೂಕಿನಲ್ಲಿ ನಡೆಯುವ ಮೈಲಾರಲಿಂಗೇಶ್ವರ ಸ್ವಾಮಿಯ ವಾರ್ಷಿಕ ಕಾರ್ಣಿಕೋತ್ಸವ ಹಾಗೂ ಕುರವತ್ತಿ ಗ್ರಾಮದ ಮಲ್ಲಿಕಾರ್ಜುನ ಮತ್ತು ಬಸವೇಶ್ವರ ಸ್ವಾಮಿ ಜಾತ್ರೆಯ ಪ್ರಯುಕ್ತ ಜನ-ಜಾನುವಾರುಗಳಿಗೆ ಕುಡಿಯುವ ನೀರನ್ನು ಒದಗಿಸಲು ಭದ್ರಾ ಜಲಾಶಯದಿಂದ 0.50 ಟಿಎಂಸಿ ನೀರು ಬಿಡಲು ನಿರ್ಧರಿಸಲಾಗಿದೆ.

ಫೆ. 2ರ ಸಂಜೆಯಿಂದ ಮೊದಲ ಮೂರು ದಿನಗಳು 500 ಕ್ಯೂಸೆಕ್‌ನಂತೆ ಹಾಗೂ ನಂತರದ ದಿನಗಳಲ್ಲಿ ಅವಶ್ಯಕತೆಗೆ ಅನುಗುಣವಾಗಿ ನೀರನ್ನು ಬಿಡಲಾಗುವುದು. ನದಿಯ ದಂಡೆಯ ಕೆಳಮಟ್ಟದಲ್ಲಿ ಸಾರ್ವಜನಿಕರು ತಿರುಗಾಡುವುದು, ದನಕರುಗಳನ್ನು ಮೇಯಿಸುವುದು ಮತ್ತು ವ್ಯವಸಾಯ ಮಾಡುವುದು ಸೇರಿದಂತೆ ಯಾವುದೇ ರೀತಿಯ ಚಟುವಟಿಕೆಗಳನ್ನು ಕೈಗೊಳ್ಳಬಾರದು. ಹಾಗೆಯೇ, ನದಿ ದಂಡೆಯಲ್ಲಿ ಅಳವಡಿಸಿರುವ ಪಂಪ್‌ಸೆಟ್‌ಗಳಿಂದ ನೀರೆತ್ತುವುದನ್ನು ನಿಷೇಧಿಸಲಾಗಿದೆ ಎಂದು ಭದ್ರಾ ಯೋಜನಾ ವೃತ್ತದ ಅಧೀಕ್ಷಕ ಎಂಜಿನಿಯರ್ ಕೆ. ತಿಪ್ಪೇಸ್ವಾಮಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT