ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೈಸೂರಿನಲ್ಲಿ ಕ್ರೀಡಾ ವಿ.ವಿ: ಚಿಂತನೆ

Last Updated 14 ಡಿಸೆಂಬರ್ 2013, 19:30 IST
ಅಕ್ಷರ ಗಾತ್ರ

ಮೈಸೂರು: ನಗರದಲ್ಲಿ ರಾಜ್ಯ ಕ್ರೀಡಾ ವಿಶ್ವವಿದ್ಯಾಲಯ ಆರಂಭಿಸಲು ಚಿಂತನೆ ನಡೆಸುವುದಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಚಿವ ಅಭಯಚಂದ್ರ ಜೈನ್ ತಿಳಿಸಿದರು.

ಚಾಮುಂಡಿ ವಿಹಾರ ಕ್ರೀಡಾಂಗ­ಣದಲ್ಲಿ ಕರ್ನಾಟಕ ರಾಜ್ಯ ಅಥ್ಲೆಟಿಕ್ಸ್‌ ಸಂಸ್ಥೆ ಮತ್ತು ಜಿಲ್ಲಾ ಘಟಕದ ಆಶ್ರಯದಲ್ಲಿ ಶನಿವಾರ ಆಯೋಜಿಸ­ಲಾಗಿದ್ದ 48ನೇ ರಾಜ್ಯ ಕ್ರಾಸ್‌ಕಂಟ್ರಿ ಚಾಂಪಿಯನ್‌ಷಿಪ್‌ ವಿಜೇತರಿಗೆ ಪ್ರಶಸ್ತಿ ವಿತರಿಸಿದ ಅವರು ಮಾತನಾಡಿದರು.

‘ಶಾಸಕ ವಾಸು ಅವರು ಕ್ರೀಡಾ ವಿವಿಯ ಕುರಿತು ಪ್ರಸ್ತಾವ ಸಲ್ಲಿಸಿದ್ದಾರೆ. ಇದಕ್ಕೆ ಪೂರಕವಾಗಿ ಮುಖ್ಯಮಂತ್ರಿ­ಗ­ಳೊಂದಿಗೆ ಚರ್ಚಿಸಿದ್ದೇನೆ. ಮುಂದಿನ ಬಜೆಟ್ ವೇಳೆಗೆ ವಿವಿ ಸ್ಥಾಪನೆ ಆಗುವ ನಿರೀಕ್ಷೆ ಇದೆ. ಸಿದ್ದರಾಮಯ್ಯ ನೇತೃತ್ವದ ಸರ್ಕಾ­ರವು ಕ್ರೀಡಾಭಿವೃದ್ಧಿಗೆ ಎಲ್ಲ  ಸಹಕಾರ ನೀಡುತ್ತದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT