ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೈಸೂರು ಬಳಿ ಚಿರತೆ ಸೆರೆ

Last Updated 18 ಸೆಪ್ಟೆಂಬರ್ 2011, 19:30 IST
ಅಕ್ಷರ ಗಾತ್ರ

ಮೈಸೂರು: ತಾಲ್ಲೂಕಿನ ಚಿಕ್ಕನಹಳ್ಳಿ ರಕ್ಷಿತ ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಿರುವ ಅರಸಿನಕೆರೆ ಬಳಿ ಮೂರು ವರ್ಷದ ಗಂಡು ಚಿರತೆ ಭಾನುವಾರ ಬೆಳಿಗ್ಗೆ  ಕಾಣಿಸಿಕೊಂಡು ಆತಂಕದ ವಾತಾವರಣವನ್ನು ಸೃಷ್ಟಿಸಿತು.
ಆಹಾರವಿಲ್ಲದೆ ನಿತ್ರಾಣಗೊಂಡಿದ್ದ ಚಿರತೆ ಓಡಲಾಗದೆ ಅಲ್ಲಲ್ಲೇ ಸುತ್ತಾಡುತ್ತಿತ್ತು. ಹೊಲದಲ್ಲಿ ಕೆಲಸ ಮಾಡುತ್ತಿದ್ದ ಸ್ವಾಮಿ ಬೆಳಿಗ್ಗೆ 8.30ರ ಸುಮಾರಿನಲ್ಲಿ  ಚಿರತೆಯನ್ನು ಕಂಡು ಗಾಬರಿಕೊಂಡು ಓಡಿದರು. ನಂತರ ಅರಣ್ಯ ಇಲಾಖೆಗೆ ಸುದ್ದಿ ಮುಟ್ಟಿಸಿದರು.

ಎಸಿಎಫ್ ದುರ್ಗೇಗೌಡ ಮತ್ತು ಸಿಬ್ಬಂದಿ ಸ್ಥಳಕ್ಕೆ ತೆರಳಿ ಪರಿಶೀಲಿಸಿದರು. ನಿತ್ರಾಣಗೊಂಡ ಚಿರತೆಯನ್ನು ಬಲೆಗೆ ಬೀಳಿಸಲು ಯತ್ನಿಸಿದರು. ಆದರೆ ಸಿಬ್ಬಂದಿಯ ಮೇಲೆ ಚಿರತೆ ತಿರುಗಿಬಿದ್ದಿತು.

ಕೊನೆಗೆ ಅರಿವಳಿಕೆ ಚುಚ್ಚುಮದ್ದನ್ನು ನೀಡಿ ಬೆಳಿಗ್ಗೆ 11.40 ಸುಮಾರಿನಲ್ಲಿ ಚಿರತೆಯನ್ನು ಬಲೆಗೆ ಬೀಳಿಸುವಲ್ಲಿ ಸಿಬ್ಬಂದಿ ಯಶಸ್ವಿಯಾದರು. ಡಾ.ನಾಗರಾಜ್ ಚಿರತೆಗೆ ಪ್ರಾಥಮಿಕ ಚಿಕಿತ್ಸೆ ನೀಡಿದರು. ಬಳಿಕ ಬೋನಿನಲ್ಲಿ ಸಾಗಿಸಿ ಸುಂಕದಕಟ್ಟೆ ಅರಣ್ಯ ಪ್ರದೇಶಕ್ಕೆ ಬಿಡಲಾಯಿತು.

ಜನಜಾತ್ರೆ
ಚಿರತೆ ಪ್ರತ್ಯಕ್ಷವಾಗಿರುವ ವಿಷಯ ತಿಳಿಯುತ್ತಿದ್ದಂತೆ ಸುತ್ತಮುತ್ತಲಿನ ಗ್ರಾಮಸ್ಥರು ಅರಸಿನಕರೆಯತ್ತ ದೌಡಾಯಿಸಿದರು. ನಿತ್ರಾಣಗೊಂಡ ಚಿರತೆ ಓಡದ  ಪರಿಸ್ಥಿತಿಯನ್ನು ಅರಿತು ಅದರ ಹತ್ತಿರವೇ ಜನರು ಸುಳಿದಾಡತೊಡಗಿದರು. ಚಿರತೆ ಬಳಿ ಸುಳಿದಾಡದಂತೆ ಜನರನ್ನು ಮನವೊಲಿಸಿ ದೂರ ಕಳುಹಿಸಲು ಅರಣ್ಯ ಇಲಾಖೆ ಸಿಬ್ಬಂದಿ ಹೆಣಗಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT