ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೈಸೂರು: ಸಿಲಿಂಡರ್ ಸ್ಫೋಟ, ಐವರ ಸಾವು

Last Updated 12 ಏಪ್ರಿಲ್ 2013, 9:58 IST
ಅಕ್ಷರ ಗಾತ್ರ

ಮೈಸೂರು: ಇಲ್ಲಿನ ಅಜೀಜ್ ನಗರದ ಬಿ.ಡಿ. ಕಾಲೋನಿಯ ಮನೆಯೊಂದರಲ್ಲಿ ಅಡುಗೆ ಅನಿಲ ಸ್ಫೋಟಗೊಂಡ ಪರಿಣಾಮ ಐವರು ಮೃತಪಟ್ಟು, ಮೂವರು ತೀವ್ರವಾಗಿ ಗಾಯಗೊಂಡಿರುವ ದುರ್ಘಟನೆ ಶುಕ್ರವಾರ ನಡೆದಿದೆ.

ಮೃತಪಟ್ಟವರನ್ನು ಮಹಮ್ಮದ್ ಅಮೀರ್ ಜಾನ್ (70), ರಿಜ್ವಾನ್ ಬಾನು (30), ಪರ್ವಿನ್ (25), ಅರ್ಬಿಯಾ (10) ಮತ್ತು ಅರಿನ್ (5) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ಮೂವರನ್ನು ಕೆ.ಆರ್. ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT